ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 FEBRUARY 2023
SHIMOGA : ವಿಮಾನ ನಿಲ್ದಾಣದಲ್ಲಿ ಉದ್ಯೋಗ (Airport Jobs) ಕೊಡಿಸುವುದಾಗಿ ನಂಬಿಸಿ ವಂಚಿಸಿರುವ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ. ಭದ್ರಾವತಿಯ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ರಫೀಕ್ ಉದ್ದೀನ್ ಎಂಬುವವರ ಮಗಳಿಗೆ ಇಂಡಿಗೋ ಏರ್ ಲೈನ್ಸ್ ಪ್ರೈವೇಟ್ ಲಿಮಿಟೆಡ್ ವಿಮಾನಯಾನ ಸಂಸ್ಥೆಯ ಗ್ರೌಂಡ್ ಸ್ಟಾಫ್ ಆಗಿ ಉದ್ಯೋಗ (Airport Jobs) ಕೊಡಿಸುವುದಾಗಿ ನಂಬಿಸಿ ವಂಚಿಸಲಾಗಿದೆ. ದಾಖಲಾತಿ ಶುಲ್ಕ, ಆನ್ ಲೈನ್ ಇಂಟರ್ ವ್ಯೂ ಶುಲ್ಕ, ಯನಿಫಾರಂ ಶುಲ್ಕ, ಐಡಿ ಕಾರ್ಡ್ ಶುಲ್ಕ ಸೇರಿದಂತೆ ಹಲವು ಕಾರಣಗಳನ್ನು ಹೇಳಿ 52,600 ರೂ. ಫೋನ್ ಪೇ ಮೂಲಕ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ
ಜನವರಿ 24 ರಿಂದ 27ರವರೆಗೆ ಶುಲ್ಕಗಳ ನೆಪದಲ್ಲಿ ಹಣ ಪಡೆದು ವಂಚಿಸಲಾಗಿದೆ. ಈ ಸಂಬಂಧ ರಫೀಕ್ ಉದ್ದೀನ್ ಅವರು ದೂರು ನೀಡಿದ್ದಾರೆ. ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಉದ್ಯೋಗಾಕಾಂಕ್ಷಿಗಳೆ ಎಚ್ಚರ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಯಾವುದೆ ಉದ್ಯೋಗಕ್ಕೆ ಈತನಕ ನೇಮಕಾತಿ ಆದೇಶ ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಉದ್ಯೋಗದ ಪೋಸ್ಟರ್ ಗಳು ನಕಲಿ. ಇವುಗಳನ್ನು ನಂಬಿ ಹಣ ಪಾವತಿಸಬಾರದು. ಒಂದು ವೇಳೆ ಈಗಾಗಲೆ ಹಣ ಪಾವತಿಸಿದ್ದರೆ ಕೂಡಲೆ ಹತ್ತಿರದ ಪೊಲೀಸ್ ಠಾಣೆ ಅಥವಾ ಶಿವಮೊಗದ ಜಯನಗರ ಠಾಣೆ ಮೇಲ್ಭಾಗದಲ್ಲಿರುವ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್