ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021
ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು KSRTC ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KSRTC ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
‘ನಾನು ಡಿಕೆಶಿ ಆಪ್ತ ಕಾರ್ಯದರ್ಶಿ’
2106ರಲ್ಲಿ KSRTC ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಕೆಂಚಪ್ಪ ಅವರಿಗೆ ಪರಿಚಯವಾಗಿದ್ದಾನೆ. ತಾನು ವಿಶ್ವಾಸ್ ಚಂದ್ರಶೇಖರ್ ಮತ್ತು ಜೊತೆಗಿದ್ದ ಮಹಿಳೆಯನ್ನು ಸಂಧ್ಯಾ ಎಂದು ಪರಿಚಿಯಿಸಿಕೊಂಡಿದ್ದಾರೆ. ‘ನಾನು ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ. ಸರ್ಕಾರಿ ಕೆಲಸ ಕೊಡಿಸುತ್ತೇನೆ’ ಎಂದು ನಂಬಿಸಿದ್ದಾನೆ.
ವಿಶ್ವಾಸ್ ಚಂದ್ರಶೇಖರ್ ಮಾತು ನಂಬಿದ ಕೆಂಚಪ್ಪ ಅವರು ತಮ್ಮ ಪರಿಚಯದವರೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಲು ಹಣ ನೀಡಿದ್ದಾರೆ. ಸ್ವಲ್ಪ ಹಣವನ್ನು ನೇರವಾಗಿ ಕೊಟ್ಟಿದ್ದಾರೆ. ಉಳಿದ ಹಣವನ್ನು ಬ್ಯಾಂಕ್ ಮೂಲಕ ವರ್ಗಾಯಿಸಿದ್ದಾರೆ.
ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿದ್ದ ವಿಶ್ವಾಸ್ ಚಂದ್ರಶೇಖರ್ ಬಳಿಕ ಸರಿಯಾಗಿ ಸ್ಪಂದಿಸಿಲ್ಲ. ಹಣ ಹಿಂತಿರುಗಿಸುವಂತೆ ಕೆಂಚಪ್ಪ ಒತ್ತಡ ಹೇರಿದ್ದಾರೆ. ವಿಶ್ವಾಸ್ ಚಂದ್ರಶೇಖರ್’ನ ಊರಿಗೆ ಹೋಗಿ ಹಣ ಕೇಳಿದಾಗ ಒಂದು ಲಕ್ಷ ರೂ.ನ ಚೆಕ್ ನೀಡಿದ್ದಾನೆ. ಆದರೆ ಆ ಚೆಕ್ ಬೌನ್ಸ್ ಆಗಿದೆ.
ಕೊನೆಗೆ ನಿವೃತ್ತ ಚಾಲಕ ಕೆಂಚಪ್ಪ ಅವರು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಚಿಕ್ಕಮಗಳೂರಿನ ವಿಶ್ವಾಸ್ ಚಂದ್ರಶೇಖರ್ ಮತ್ತು ಮೈಸೂರಿನ ಸಂಧ್ಯಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422