ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 FEBRUARY 2021
ಕೌನ್ ಬನೇಗಾ ಕರೋಡ್ ಪತಿ ಕಂಪನಿಯವರು ಎಂದು ನಂಬಿಸಿ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರಿಗೆ 1.43 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೀರ್ಥಹಳ್ಳಿಯ ಅನಂತ ಕುಮಾರ್ ಎಂಬುವವರಿಗೆ ಕರೆ ಮಾಡಿದ ಅಪರಿಚತರು, ಕೆಬಿಸಿ ಕಂಪನಿಯಿಂದ ಲಕ್ಕಿ ಡ್ರಾ ಬಂದಿದೆ ಎಂದು ನಂಬಿಸಿದರು. 25 ಲಕ್ಷ ಲಕ್ಕಿ ಡ್ರಾ ಬಂದಿದೆ. ಹಣ ಬೇಕಿದ್ದರೆ ಕೆಲವು ಚಾರ್ಜ್ ಕಟ್ಟಬೇಕು ಎಂದರು.
ಹಂತ ಹಂತವಾಗಿ ನಾಲ್ಕು ಬಾರಿ, ನಾಲ್ಕು ಬ್ಯಾಂಕ್ ಖಾತೆಗಳಿಗೆ ಒಟ್ಟು 1.43 ಲಕ್ಷ ರೂ. ಹಣ ಹಾಕಿಸಿಕೊಂಡಿದ್ದಾರೆ. ಮೋಸ ಹೋಗಿರುವುದು ಅರಿವಿಗೆ ಬರುತ್ತಿದ್ದಂತೆ ಅನಂತ ಕುಮಾರ್ ಅವರು ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422