ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣ 1 : ನೂರು ಕೋಟಿಯ ಲೋನ್
ಮೈಸೂರಿನ ಸಿವಿಲ್ ಎಂಜಿನಿಯರ್ ರಾಜೇಶ್ ಎಂಬುವವರಿಗೆ ನೂರು ಕೋಟಿ ರೂ. ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್’ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು. ಇದಕ್ಕಾಗಿ ಐವರು ಆರೋಪಿಗಳು ಹತ್ತು ಲಕ್ಷ ರೂ. ಪಡೆದುಕೊಂಡಿದ್ದಾರೆ ಎಂದು ರಾಜೇಶ್ ದೂರಿನಲ್ಲಿ ತಿಳಿಸಿದ್ದಾರೆ. ಹಣ ವಾಪಸ್ ಕೇಳಿದಾಗ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ 2 : ವಾಟರ್ ಆರ್.ಒ ಪ್ಲಾಂಟ್
106 ವಾಟರ್ ಆರ್.ಒ. ಪ್ಲಾಂಟ್ ಕೊಡಿಸುವುದಾಗಿ ಶಿವಮೊಗ್ಗದ ಗುತ್ತಿಗೆದಾರ ಲಕ್ಷ್ಮಣ್ ಎಂಬುವವರಿಗೆ ವಂಚಿಸಲಾಗಿದೆ. ಲಕ್ಷ್ಮಣ್ ಅವರಿಂದ 26.25 ಲಕ್ಷ ರೂ. ಹಣ ಪಡೆದುಕೊಂಡು ವಂಚನೆ ಮಾಡಲಾಗಿದೆ. ಆರ್.ಒ ಪ್ಲಾಂಟ್ ಕೊಡಿಸದೆ ಇರುವಾಗ ಹಣ ಕೇಳಿದಾಗ ಲಕ್ಷ್ಮಣ್ ಅವರಿಗೆ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಐವರ ವಿರುದ್ಧ ಕೇಸ್
ಎರಡು ಪ್ರಕರಣದಲ್ಲಿ ಐವರು ಆರೋಪಿಗಳು ತಾವು ಸಚಿವ ಈಶ್ವರಪ್ಪ ಅವರ ಆಪ್ತರು ಎಂದು ಬಿಂಬಿಸಿಕೊಂಡಿದ್ದಾರೆ. ಇದನ್ನು ನಂಬಿ ಮೈಸೂರಿನ ರಾಜೇಶ್ ಮತ್ತು ಶಿವಮೊಗ್ಗದ ಲಕ್ಷ್ಮಣ್ ಅವರು ಹಣ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಎರಡು ಪ್ರಕರಣದಲ್ಲಿ ವಿಠಲ ರಾವ್, ಮಹೊಮ್ಮದ್ ಮುಫಾಸಿರ್, ಮಂಜುನಾಥ, ಕಾಜಿವಲೀಸ್, ಮೊಹಮ್ಮದ್ ರೆಹಮಾನ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200






