ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 FEBRUARY 2024
SHIMOGA : ಪ್ರತಿಷ್ಠಿತ ಮಲ್ಟಿನ್ಯಾಷನಲ್ ಕಂಪನಿ ಐಬಿಎಂನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ಹರಿಗೆಯ ಯುವಕ ಮತ್ತು ಆತನ ಸ್ನೇಹಿತರಿಗೆ 89 ಲಕ್ಷ ರೂ. ಹಣ ವಂಚಿಸಲಾಗಿದೆ.
ಸ್ನೇಹಿತರಿಗೆ ಕೆಲಸದ ವಿಚಾರ
ಶಿವಮೊಗ್ಗದ ಹರಿಗೆಯ ಯುವಕನೊಬ್ಬನಿಗೆ (ಹೆಸರು ಗೌಪ್ಯ) ಬೆಂಗಳೂರಿನಲ್ಲಿರುವ ಸ್ನೇಹಿತರೊಬ್ಬರ ಮೂಲಕ ಒರಿಸಾ ಮೂಲದ ಸೂರ್ಯಂಶ್ ಅಲಿಯಾಸ್ ಕಾಲಿರಾತ್ ಎಂಬಾತನ ಪರಿಚಯವಾಗಿತ್ತು. ಆತನ ಐಬಿಎಂ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ್ದ. ರಾಕೇಶ್ ಶಿವಮೊಗ್ಗದಲ್ಲಿರುವ ತನ್ನ ಸ್ನೇಹಿತರಿಗೆ ಈ ವಿಚಾರ ತಿಳಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
‘ಒಬ್ಬೊಬ್ಬರಿಗೆ 1.60 ಲಕ್ಷ ರೂ. ಕೊಡಬೇಕು’
ಹರಿಗೆಯ ಯುವಕ ತನ್ನ ಹಲವು ಸ್ನೇಹಿತರ ರೆಸ್ಯೂಂಗಳನ್ನು ಸೂರ್ಯಂಶ್ಗೆ ಕಳುಹಿಸಿದ್ದ. ಆದರೆ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಕೊಡಿಸಲು ತಲಾ 1.60 ಲಕ್ಷ ರೂ. ಹಣ ನೀಡಬೇಕು. ಇದಕ್ಕೆ ಪ್ರತಿಯಾಗಿ ಐಬಿಎಂ ಕಂಪನಿಯಿಂದ ಲ್ಯಾಪ್ಟಾಪ್ ಒದಗಿಸಲಾಗುತ್ತದೆ ಎಂದು ಸೂರ್ಯಂಶ್ ನಂಬಿಸಿದ್ದ. ಅಂತೆ ಹರಿಗೆಯ ಯುವಕ ವಿವಿಧ ಬ್ಯಾಂಕ್ ಖಾತೆಗಳಿಂದ ಸೂರ್ಯಂಶ್ ಸೂಚಿಸಿದ ಬ್ಯಾಂಕ್ ಖಾತೆಗೆ ಒಟ್ಟು 89 ಲಕ್ಷ ರೂ. ಹಣ ಕಳುಹಿಸಿದ್ದ.
ಇದನ್ನೂ ಓದಿ – ಕೆಮಿಕಲ್ನಲ್ಲಿ ಪೇಪರ್ ಅದ್ದಿ 500 ರೂ. ನೋಟ್ ತಯಾರಿ, ಕಣ್ಣಾರೆ ಕಂಡು ನಂಬಿದ ವ್ಯಕಿಗೆ ಲಕ್ಷ ಲಕ್ಷ ಟೋಪಿ
ಈತನಕ ಸೂರ್ಯಂಶ್ ಕಡೆಯಿಂದ ಉದ್ಯೋಗವು ಸಿಕ್ಕಿಲ್ಲ, ಲ್ಯಾಪ್ಟಾಪ್ ಕೂಡ ಕೊಡಿಸಿಲ್ಲ. ಕರೆ ಮಾಡಿದರೆ ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಆರೋಪಿಸಿ ಹರಿಗೆಯ ಯುವಕ ತುಂಗಾ ನಗರ ಠಾಣೆಗೆ ದೂರು ನೀಡಿದ್ದಾನೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422