ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 09 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ, ಒಂದು ಲಕ್ಷ ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಭದ್ರಾವತಿಯ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಕೇಸ್?
ಕೋಲ್ಕತ್ತಾ ಮೂಲದ ವ್ಯಕ್ತಿಯೊಬ್ಬ, ಭದ್ರಾವತಿಯ ಭೂತನಗುಡಿ ನಿವಾಸಿ ರಫಿಕ್ ಅಹಮದ್ ಎಂಬುವವರ ಮಗನಿಗೆ, ಮೆಡಿಕಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ಕೊಡಿಸುವುದಾಗಿ ನಂಬಿಸಿದ್ದ. ಇದಕ್ಕೆ ಆರು ಲಕ್ಷ ರೂ. ನೀಡಬೇಕು ಎಂದು ಹೇಳಿದ್ದ. ಮುಂಗಡವಾಗಿ ಒಂದು ಲಕ್ಷ ರುಪಾಯಿಯನ್ನು ತನ್ನ ಖಾತೆಗೆ ಹಾಕುವಂತೆ ತಿಳಿಸಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕೋಲ್ಕತ್ತಾ ಬ್ರಾಂಚ್‍ನ ಖಾತೆ ವಿವರ ಒದಗಿಸಿದ್ದ.
ಹಣ ಹೋಯ್ತು, ವ್ಯಕ್ತಿ ನಾಪತ್ತೆ
ಹಣ ಪಡೆದ ಕೋಲ್ಕತ್ತಾದ ರಿತೇಷ್ ಅಗರ್‍ವಾಲ್ ಎಂಬಾತ, ಕೊನೆಗೆ ರಫಿಕ್ ಅಹಮದ್ ಅವರ ಕರೆ ಸ್ವೀಕರಿಸುತ್ತಿಲ್ಲ. ಇದರಿಂದ ಆತಂಕಗೊಂಡ ರಫಿಕ್ ಅಹಮದ್ ಅವರು ದೂರು ನೀಡಿದ್ದಾರೆ.
ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]