ಹನ್ನೊಂದು ಗಂಟೆಗೆ ಸೈರನ್ ಶಬ್ದ, ಗಾಂಧಿ ಬಜಾರ್ ಸ್ಥಬ್ಧ, ಕರ್ಫ್ಯೂ ಸಡಿಲದ ಅವಧಿ ಹೇಗಿತ್ತು ಬಜಾರ್ ವಾತಾವರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 DECEMBER 2020

ಮೂರು ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಮಾಡಿದ್ದರಿಂದ ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಇವತ್ತು ಪುನಃ ವ್ಯಾಪಾರ, ವಹಿವಾಟು ಆರಂಭವಾಗಿತ್ತು. ಕರ್ಫ್ಯೂ ಸಡಿಲಿಕೆ ಅವಧಿ ಮುಕ್ತಾಯವಾಗುತ್ತಿದ್ದಂತೆ, ಪೊಲೀಸರು ಗಾಂಧಿ ಬಜಾರನ್ನು ಪೂರ್ತಿ ಬಂದ್ ಮಾಡಿಸಿದರು.

ಹೂವು, ಹಣ್ಣು, ತರಕಾರಿ

ಗಾಂಧಿ ಬಜಾರ್‍ನಲ್ಲಿ ಹೂವು, ಹಣ್ಣು, ತರಕಾರಿ ಖರೀದಿಗೆ ಜನ ಸೇರಿದ್ದರು. ತರಕಾರಿ ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯ ಜನರು ಬಂದಿದ್ದರು. ಬಹುತೇಕ ಎಲ್ಲ ತರಕಾರಿ ಅಂಗಡಿಗಳ ಬಾಗಿಲು ತೆಗೆಯಲಾಗಿತ್ತು. ಬೆಳಗ್ಗೆ 7 ಗಂಟೆಯಿಂದ ವ್ಯಾಪಾರ ಆರಂಭವಾಗಿತ್ತು.

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ದಿನಸಿ, ಗ್ರಂಥಿಕೆ ಅಂಗಡಿಗಳಿಗೂ ಗ್ರಾಹಕರು

ದಿನಸಿ ಮತ್ತು ಗ್ರಂಥಿಕೆ ಅಂಗಡಿಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದ್ದರು. ಹೋಲ್ ಸೇಲ್ ಮಾರಾಟಗಾರರು ಇಲ್ಲಿರುವುದರಿಂದ ನಗರದ ಬೇರೆ ಬೇರೆ ಕಡೆಯಿಂದ ಗ್ರಾಹಕರು ಬಂದು ಖರೀದಿ ಮಾಡಿದರು.

ಜವಳಿ, ಆಭರಣ ವ್ಯಾಪಾರಿಗಳಿಗೆ ಬರೆ

ಕರೋನ ಲಾಕ್‍ಡೌನ್‍ನಿಂದಾಗಿ ಜವಳಿ, ಆಭರಣ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಈಗ ಕರ್ಫ್ಯೂನಿಂದಾಗಿ ಗಾಯದ ಮೇಲೆ ಬರೆ ಬಿದ್ದ ಹಾಗೆ ಆಗಿದೆ. ಬೆಳಗ್ಗೆ 7 ರಿಂದ 11 ಗಂಟೆವರೆಗೆ ಕರ್ಫ್ಯೂಗೆ ರಿಲೀಫ್‍ ಸಿಕ್ಕಿದೆ. ಆದರೆ ಜವಳಿ ಮತ್ತು ಆಭರಣ ಖರೀದಿಗೆ ಗ್ರಾಹಕರು ಇಲ್ಲದೆ, ವ್ಯಾಪಾರಿಗಳು ತಲೆ ಮೇಲೆ ಕೈ ಹೊತ್ತು ಕೂರುವಂತಾಯಿತು.

VIDEO REPORT

ಹನ್ನೊಂದಕ್ಕೆ ಎಲ್ಲವು ಬಂದ್

ಹನ್ನೊಂದು ಗಂಟೆ ಆಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿದರು. ಮೈಕ್ ಮೂಲಕ ಅನೌನ್ಸ್ ಮಾಡುತ್ತಾ, ಅಂಗಡಿಗಳ ಬಾಗಿಲು ಹಾಕಿಸಿದರು. ಗಾಂಧಿ ಬಜಾರ್‍ಗೆ ಬಂದಿದ್ದ ಗ್ರಾಹಕರನ್ನು ಹೊರಗೆ ಕಳುಹಿಸಿದರು. ಕೆಲವೇ ನಿಮಿಷದಲ್ಲಿ ಇಡೀ ಗಾಂಧಿ ಬಜಾರ್ ಸ್ಥಬ್ಧವಾಯಿತು.

ಬಿ.ಹೆಚ್‍.ರಸ್ತೆ ಟ್ರಾಫಿಕ್ ಜಾಮ್

ಇತ್ತ ಕರ್ಫ್ಯೂ ರಿಲೀಫ್ ಅವಧಿಯಲ್ಲಿ ಬಿ.ಹೆಚ್‍.ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕರ್ನಾಟಕ ಸಂಘದದಿಂದ ಎ.ಎ.ಸರ್ಕಲ್‍ವರೆಗೆ ಒನ್ ವೇ ರಸ್ತೆಯಲ್ಲಿ, ಎರಡು ಬದಿಯ ವಾಹನಗಳನ್ನು ಸಂಚರಿಸುವಂತೆ ಮಾಡಲಾಗಿದೆ. ಇದರಿಂದ ಗಾಂಧಿ ಬಜಾರ್‍ ಬಳಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಯಿತು. ಕೂಡಲೆ ಪೊಲೀಸರು ಎರಡು ಬದಿಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment