ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್‌, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ನಡುರಾತ್ರಿ ದನಗಳ್ಳತನಕ್ಕೆ ಯತ್ನಿಸುತ್ತಿದ್ದ ಗ್ಯಾಂಗ್‌ (Gang) ಒಂದು ಸ್ಥಳೀಯರು ಬರುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿದೆ. ಈ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಶಿವಮೊಗ್ಗದ ತಾಲೂಕು ಗಾಜನೂರಿನ ಬಸವೇಶ್ವರ ಬೀದಿಯಲ್ಲಿ ನಡೆದಿದೆ. ಮಾ.20ರಂದು ರಾತ್ರಿ 3 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.

ನಡುರಾತ್ರಿ ಶಬ್ದ, ಹೊರಗೆ ನಿಂತಿತ್ತು ಕಾರು

Cow-theives-escaped-in-a-car-in-gajanuru

ಬಸವೇ‍ಶ್ವರ ಬೀದಿಯಲ್ಲಿ ನಡುರಾತ್ರಿ ಶಬ್ದವಾಗುತ್ತಿತ್ತು. ನಾಯಿಗಳು ಜೋರಾಗಿ ಬೊಗಳುತ್ತಿದ್ದವು. ಅಕ್ಕಪಕ್ಕದ ಮನೆಯವರು ಎಚ್ಚರಗೊಂಡಿದ್ದಾರೆ. ಹೊರ ಬಂದಾಗ ರಸ್ತೆ ಬದಿ ನಿಂತಿದ್ದ ಹಸುವೊಂದನ್ನು ಸ್ಯಾಂಟ್ರೋ ಕಾರಿಗೆ ತುಂಬಿಕೊಳ್ಳುವ ಪ್ರಯತ್ನ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಕೆಳಗಿದೆ ವಿಡಿಯೋ. 

Web-Design

ಮೊಬೈಲ್‌ನಲ್ಲಿ ಕಳ್ಳತನ ಯತ್ನ ಸೆರೆ

ಪ್ರೀತಂ ಎಂಬುವವರು ತಮ್ಮ ಮನೆ ಮೇಲಿನಿಂದ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಹಸುವೊಂದನ್ನು ಕಾರಿನೊಳಗೆ ಎಳೆದೊಯ್ಯಲು ಪ್ರಯತ್ನಿಸುತ್ತಿದ್ದ. ಕೂಡಲೆ ಪ್ರೀತಂ ರಸ್ತೆಗೆ ಬಂದಿದ್ದು, ‘ಯಾರು ಅದುʼ ಎಂದು ಜೋರಾಗಿ ಕೂಗಿದ್ದಾರೆ. ಆಗ ಕಳ್ಳರು (Gang) ಹಸುವನ್ನು ಬಿಟ್ಟು ಕಾರು ಏರಿ ಪಾರಾರಿಯಾಗಿದ್ದಾರೆ. ಇಲ್ಲಿದೆ ವಿಡಿಯೋ.

ಕಾರಿನಲ್ಲಿ ಮೂರ್ನಾಲ್ಕು ಜನರಿದ್ದರು ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ನಗರ ಪೊಲೀಸರ ಕಾರ್ಯಾಚರಣೆ, ಬೈಕು, ಚಿನ್ನದ ಸಹಿತ ಸಿಕ್ಕಿಬಿದ್ದ ಆರೋಪಿ, ಏನಿದು ಕೇಸ್‌?

Leave a Comment