ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 MARCH 2024
SHIMOGA : ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಮೂವರ ಪರಾರಿಯಾಗಿದ್ದಾರೆ. ದಾರಿಯಲ್ಲಿ ಹೋಗುವವರ ಮುಖಕ್ಕೆ ಖಾರದ ಪುಡಿ ಎರಚಿ ಮಾರಕಾಸ್ತ್ರ ತೋರಿಸಿ ದರೋಡೆಗೆ ಹೊಂಚು ಹಾಕಿದ್ದರು.
ಶರಾವತಿ ನಗರದಿಂದ ವಿನೋಬನಗರಕ್ಕೆ ಹೋಗುವ ಮಾರ್ಗದಲ್ಲಿ ಚಾನಲ್ ಸಮೀಪ ಗ್ಯಾಂಗ್ ಹೊಂಚು ಹಾಕಿ ಕೂತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿದ ಪೊಲೀಸರು ಒಂದು ಡ್ರ್ಯಾಗರ್, ಕಬ್ಬಿಣದ ರಾಡ್, ಲಾಂಗು ಮತ್ತು ಖಾರದ ಪುಡಿಯನ್ನು ವಶಕ್ಕೆ ಪಡೆದಿದ್ದಾರೆ. ವಿನಯ್, ಸೃಜನ್ ಸೇರಿದಂತೆ ಐವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






