ಶಿವಮೊಗ್ಗ ಲೈವ್
SHIVAMOGGA LIVE NEWS | 26 MARCH 2024 (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಮೂವರ ಪರಾರಿಯಾಗಿದ್ದಾರೆ. ದಾರಿಯಲ್ಲಿ ಹೋಗುವವರ ಮುಖಕ್ಕೆ ಖಾರದ ಪುಡಿ ಎರಚಿ ಮಾರಕಾಸ್ತ್ರ ತೋರಿಸಿ ದರೋಡೆಗೆ ಹೊಂಚು ಹಾಕಿದ್ದರು.
ಶರಾವತಿ ನಗರದಿಂದ ವಿನೋಬನಗರಕ್ಕೆ ಹೋಗುವ ಮಾರ್ಗದಲ್ಲಿ ಚಾನಲ್ ಸಮೀಪ ಗ್ಯಾಂಗ್ ಹೊಂಚು ಹಾಕಿ ಕೂತ್ತಿದೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ದಾಳಿ ನಡೆಸಿದ ಪೊಲೀಸರು ಒಂದು ಡ್ರ್ಯಾಗರ್, ಕಬ್ಬಿಣದ ರಾಡ್, ಲಾಂಗು ಮತ್ತು ಖಾರದ ಪುಡಿಯನ್ನು ವಶಕ್ಕೆ ಪಡೆದಿದ್ದಾರೆ. ವಿನಯ್, ಸೃಜನ್ ಸೇರಿದಂತೆ ಐವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
