ಶಿವಮೊಗ್ಗ: ಸೋಗಾನೆಯ ಕೇಂದ್ರ ಕಾರಾಗೃಹಕ್ಕೆ ಹೊರಗಿನಿಂದ ಗಾಂಜಾ ಪ್ಯಾಕೆಟ್ (mobile phone) ಎಸೆಯಲಾಗಿತ್ತು. ಅವುಗಳನ್ನು ಅಕ್ರಮವಾಗಿ ಪಡೆದಿದ್ದ ಇಬ್ಬರು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನ ಭದ್ರತಾ ಸಿಬ್ಬಂದಿ ನಡೆಸಿದ ಹಠಾತ್ ತಪಾಸಣೆ ವೇಳೆ ಈ ಅಕ್ರಮ ಬಯಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಒಳಗೆ ರಾತ್ರಿ ತೂರಿ ಬಂತು ಪೊಟ್ಟಣ, ತೆಗೆದು ನೋಡಿದ ಸಿಬ್ಬಂದಿಗೆ ಶಾಕ್
ಫೆಬ್ರವರಿ 1ರ ಬೆಳಗ್ಗೆ ಕಾರಾಗೃಹದ ಸಿಬ್ಬಂದಿ ಮತ್ತು ಕೆ.ಎಸ್.ಐ.ಎಸ್.ಎಫ್ ಸಿಬ್ಬಂದಿ ಗಸ್ತಿನಲ್ಲಿದ್ದಾಗ, ಜೈಲಿನ ಆವರಣದೊಳಗೆ ಹೊರಗಿನಿಂದ ಪೊಟ್ಟಣಗಳನ್ನು ಎಸೆಯುತ್ತಿರುವುದು ಗಮನಕ್ಕೆ ಬಂದಿದೆ. ಒಳಗೆ ಪರಿಶೀಲನೆ ನಡೆಸಿದಾಗ ಪೊಟ್ಟಣಗಳನ್ನು ಹೊಂದಿದ್ದ ವಿಚಾರಣಾಧೀನ ಕೈದಿಗಳಾದ ಮೊಹ್ಮದ ಖಲಂದರ್ ಮತ್ತು ಅಬ್ದುಲ್ ಆಸೀಫ್ ಸಿಕ್ಕಿಬಿದ್ದಿದ್ದಾರೆ.

ಇವರಿಂದ ಒಂದು ಸಣ್ಣ ಕೀಪ್ಯಾಡ್ ಮೊಬೈಲ್ ಫೋನ್ ಮತ್ತು ಸಣ್ಣ ಪೊಟ್ಟಣಗಳಲ್ಲಿದ್ದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








