ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020
ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಒಂದು ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ತಾಲೂಕು ಕಡೇಕಲ್ ಗ್ರಾಮದ ಅಬೀದ್ (35) ಬಂಧಿತ. ಇಂದಿರಾನಗರ ಶ್ರೀರಾಮನಗರ ರಸ್ತೆ ಪಕ್ಕದ ಲೇಔಟ್‍ನಲ್ಲಿ ಅಬೀದ್ ಖಾನ್ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು.
ಅಬೀದ್‍ನಿಂದ 1 ಕೆ.ಜಿ. ನೂರು ಗ್ರಾಂ ಗಾಂಜಾ, 700 ರೂ. ನಗದು ವಶಕ್ಕೆ ಪಡೆಯಲಾಗಿದೆ. ಪಿಎಸ್ಐ ತಿರುಮಲೇಶ್, ಸಿಬ್ಬಂದಿಗಳಾದ ಸೋಮನಾಯ್ಕ, ಲಂಕೇಶ್ ಕುಮಾರ್, ಅರಿಹಂತ್ ಶಿರಹಟ್ಟಿ, ಪ್ರಶಾಂತ್ ಕುಮಾರ್, ಅರುಣ್‌ಕುಮಾರ್, ಜಗದೀಶ್‌ನಾಯ್ಕ ಅವರು ಕಾರ್ಯಾಚರಣೆಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]