ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020
ಮಾರಾಟದ ಉದ್ದೇಶದಿಂದ ಜಮೀನಿನಲ್ಲಿ ಬೆಳೆದ ಗಾಂಜಾ ಗಿಡಗಳನ್ನು ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಲಮನೆ ಗ್ರಾಮದಲ್ಲಿ ದಾಳಿ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೂಡಲಮನೆ ಟಿ.ಆರ್.ಮಂಜುನಾಥ್ ಎಂಬಾತ ಇಲ್ಲಿನ ಸರ್ವೆ ನಂಬರ್ 27ರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಹನ್ನೊಂದು ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 75 ಸಾವಿರ ರೂ. ಎಂದು ಅಂದಾಜು ಮಾಡಲಾಗಿದೆ.
ದಾಳಿ ವೇಳೆ ಮಂಜುನಾಥ್ ಪರಾರಿಯಾಗಿರುವುದಾಗಿ ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಅಬಕಾರಿ ಉಪ ಆಯುಕ್ತ ಕ್ಯಾ.ಅಜಿತ್ ಕುಮಾರ್ ಅವರ ನಿರ್ದೇಶನದಲ್ಲಿ ದಾಳಿ ನಡೆಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]