ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಸೆಪ್ಟಂಬರ್ 2020
ಬನ್ನಿಕೆರೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, 20 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ನಿರ್ದೇಶನದ ಮೇರೆಗೆ ದಾಳಿ ಬನ್ನಿಕೆರೆ ಗ್ರಾಮದಲ್ಲಿ ಮೂರ್ತಿ ನಾಯ್ಕ ಅಲಿಯಾಸ್ ಮಾರುತಿ ನಾಯ್ಕ ಎಂಬಾತ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕ ಪಡೆಯಲಾಗಿದೆ.
ಆರೋಪಿ ಮೂರ್ತಿ ನಾಯ್ಕ ಪರಾರಿಯಾಗಿದ್ದು, ಆರೋಪಿಯ ಪತ್ತೆಹಚ್ಚಲಾಗುತ್ತಿದೆ. ಅಬಕಾರಿ ನಿರೀಕ್ಷಕರಾದ ಶೀಲಾ ಧಾರಜ್‍ಕರ್, ಹಾಲಾನಾಯ್ಕ್, ದಿವ್ಯಾ ಹಾಗೂ ಅಬಕಾರಿ ಉಪ ನಿರೀಕ್ಷಕರುಗಳು ಆರ್.ಶ್ರೀನಾಥ್, ಅಬಕಾರಿ ರಕ್ಷಕರಾದ ಕೆಂಪರಾಮ ಹಾಗೂ ಇತರ ಅಬಕಾರಿ ಸಿಬ್ಬಂದಿಗಳು ದಾಳಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]