ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 JUNE 2021
ಸ್ಮಶಾನದ ಬಳಿ ಕೆಜಿಗಟ್ಟಲೆ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಭದ್ರಾವತಿಯ ಹೊಳೆಹೊನ್ನೂರು ರಸ್ತೆಯ ಸ್ಮಶಾನದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಭದ್ರಾವತಿಯ ಮೋಮಿನ್ ಮೊಹಲ್ಲಾದ ಸೈಯದ್ ಅರ್ಬಾಜ್ ಅಲಿಯಾಸ್ ಮಂಡ್ಯ (23), ನೆಹರು ನಗರದ ಫರ್ವೀಜ್ ಮಾಯಾ (22) ಬಂಧಿತರು.
ಆರೋಪಿಗಳಿಂದ 2 ಕೆಜಿ 100 ಗ್ರಾಂ ಗಾಂಜಾ, 1600 ರೂ. ನಗದು, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಗಾಂಜಾ, ಕಳ್ಳಭಟ್ಟಿ, ಅಕ್ರಮ ಮದ್ಯ ದಂಧೆ ಚುರುಕು ಪಡೆದುಕೊಂಡಿದೆ. ಇದರ ನಿಗ್ರಹಕ್ಕೆ ಪೊಲೀಸ್ ಇಲಾಖೆ, ಅಬಕಾರಿ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸುತ್ತಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






