ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟಂಬರ್ 2020
ಓಮ್ನಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾರಿನಲ್ಲಿತ್ತು ಕೆಜಿಗಟ್ಟಲೆ ಗಾಂಜಾ
ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತ ಮೇರೆಗೆ ಬಿ.ಹೆಚ್.ರಸ್ತೆಯಲ್ಲಿ ದಾಳಿ ನಡೆಸಿದ ಭದ್ರಾವತಿ ಪೊಲೀಸರು, ಆರು ಕೆ.ಜಿ 400 ಗ್ರಾಂ ಗಾಂಜಾ ಪತ್ತೆಯಾಗಿದೆ.
ಎಂಟು ಮಂದಿ ಅರೆಸ್ಟ್
ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಸಂಬಂಧ ಭದ್ರಾವತಿ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಹೊಸಸಿದ್ದಾಪುರದ ವಿಜಯ್ ಕುಮಾರ್ (19), ಸಂಕ್ಲಿಪುರದ ಕಿರಣ್ (22), ಹೊಸಸಿದ್ದಾಪುರದ ಚಂದನ್ (18), ಜಟ್ ಪಟ್ ನಗರ ಕಿರಣ್ (28), ಹಳೆನಗರದ ಮಂಜುನಾಥ್ (27), ಸಿದ್ದಾಫುರ ತಾಂಡಾದ ಪವನ್ ನಾಯಕ್ (18), ಹೊಸಸಿದ್ದಾಪುರದ ಲಿಖಿತ್ ಕುಮಾರ್ (21), ಸಂಕ್ಲಿಪುರದ ಚಲುವ ಕುಮಾರ್ (23) ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಡಿವೈಎಸ್‍ಪಿ ಸುಧಾಕರ್ ನಾಯಕ್ ಮಾರ್ಗದರ್ಶನದಲ್ಲಿ, ಭದ್ರಾವತಿ ನಗರ ಸರ್ಕಲ್ ಇನ್ಸ್‍ಪೆಕ್ಟರ್ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ, ಹಳೆನಗರ ಠಾಣೆ ಪಿಎಸ್ಐ ಶ್ರೀನಿವಾಸ್ ಮತ್ತು ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]