ಮನೆಗೆ ಬೆಂಕಿ, ಸುಟ್ಟು ಕರಕಲಾಯ್ತು ಲಕ್ಷ ಲಕ್ಷ ಮೌಲ್ಯದ ವಸ್ತುಗಳು, ಏನೇನೆಲ್ಲ ಆಹುತಿಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 MAY 2024

THIRTHAHALLI : ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸಟ್ಟು ಕರಕಲಾಗಿವೆ. ತೀರ್ಥಹಳ್ಳಿ ತಾಲೂಕು ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿಣಿಯ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

‌ಗುರುಮೂರ್ತಿ ಎಂಬುವವರ ಮನೆಗೆ ಬೆಂಕಿ ತಗುಲಿತ್ತು. ವಿಷಯ ತಿಳಿದು ತೀರ್ಥಹಳ್ಳಿ ಮತ್ತು ಕೊಪ್ಪದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಲಕ್ಷ ಲಕ್ಷ ಮೌಲ್ಯದ ವಸ್ತು ಭಸ್ಮ

ಮನೆಯಲ್ಲಿ ಇಟ್ಟಿದ್ದ ಅಡಿಕೆ, ಕಾಳುಮೆಣಸು, ಭತ್ತದ ಮೂಟೆ, ಒಂದು ಬೈಕ್, ಕೊಟ್ಟಿಗೆ, ಒಂದು ಎಕರೆ ತೋಟಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಲಕ್ಷಾಂತಗರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿದ್ದರು.

ಇದನ್ನೂ ಓದಿ – ಶಿವಮೊಗ್ಗ ರಸ್ತೆ ಪಕ್ಕದ ಜಮೀನಿಗೆ ಪಲ್ಟಿಯಾದ ಬಸ್‌, ಅದೃಷ್ಟವಶಾತ್‌ ತಪ್ಪಿತು ದೊಡ್ಡ ದುರಂತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment