ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ನಾಪತ್ತೆ ಕೇಸ್, 15 ಗಂಟೆ ಕಳೆದರೂ ಸಿಗದ ಸುಳಿವು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021

ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಕಣ್ಮರೆಯಾಗಿ ಹದಿನೈದು ಗಂಟೆಯಾಗಿದೆ. ಈವರೆಗೂ ಅವರ ಸುಳಿವು ಪತ್ತೆಯಾಗಿಲ್ಲ. ಈ ಮಧ್ಯೆ ಅವರ ಕುಟುಂಬದವರು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ | ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ

ಶಿವಮೊಗ್ಗ ಡಿಸಿ ಕಚೇರಿಯ ಸೆಕ್ಷನ್ ಒಂದರ ಎಫ್ .ಡಿ.ಎ ಆಗಿರುವ ಗಿರಿರಾಜ್ ಅವರು ಬಸವನಗುಡಿಯ ತಮ್ಮ ಮನೆಯಿಂದ ನಾಪತ್ತೆಯಾಗಿದ್ದಾರೆ. ಇದು ಅಧಿಕಾರಿಗಳ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.

ದೂರು ದಾಖಲಿಸಿದ ಕುಟುಂಬ

ಇನ್ನು, ಅಧಿಕಾರಿ ಗಿರಿರಾಜ್ ಅವರ ಕುಟುಂಬದವರು ಸಂಜೆ ಜಯನಗರ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಗಿರಿರಾಜ್ ಅವತ ಪತ್ನಿ ಜ್ಯೋತಿ ಅವರು ದೂರು ನೀಡಿದ್ದಾರೆ. ತಮ್ಮ ಪತಿ ಗಿರಿರಾಜ್ ಅವರು ಬಸವನಗುಡಿಯ ಮನೆಯಿಂದ ಹೋದವರು ಮರಳಿ ಬಂದಿಲ್ಲ. ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಹುಡಕಿಕೊಡುವಂತೆ ಗಿರಿರಾಜ್ ಅವರ ಪತ್ನಿ ದೂರಿನಲ್ಲಿ ಮನವಿ ಮಾಡಿದ್ದಾರೆ.

LifeSpring%2BKan%2B02

ಸಂಚಲನ ಸೃಷ್ಟಿಸಿದ ಪ್ರಕರಣ

ಗಿರಿರಾಜ್ ಅವರು ಕಣ್ಮರೆಯಾಗಿರುವುದು ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಗಿರಿರಾಜ್ ಅವರು ಅಧಿಕಾರಿಗಳ ವಾಟ್ಸಪ್ ಗ್ರೂಪ್’ನಲ್ಲಿ ಪೋಸ್ಟ್ ಮಾಡಿರುವ ಸಂದೇಶ ತೀವ್ರ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಗಿರಿರಾಜ್ ಅವರ ಮೊಬೈಲ್ ಸಿಗ್ನಲ್ ಕೊನೆಯಾದಾಗಿ ಸಿಕ್ಕ ಪ್ರದೇಶಕ್ಕೆ ಅಧಿಕಾರಿಗಳ ದಂಡು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

c1

1632381449326627 1

c2

c4

c3

0001

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment