ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021
ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆಯಾಗಿ ಒಂದು ವಾರ ಕಳದಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಪ್ ಮೆಸೇಜ್ ಮಾಡಿ ಗಿರಿರಾಜ್ ನಾಪತ್ತೆಯಾಗಿದ್ದಾರೆ. ಈವರೆಗೂ ಗಿರಿರಾಜ್ ಸುಳಿವು ಪತ್ತೆಯಾಗಿಲ್ಲ.
ಇದನ್ನು ಓದಿ | ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆ ಕೇಸ್, ಟ್ವಿಸ್ಟ್ ಕೊಟ್ಟ ಎಟಿಎಂ, ಮೂರು ದಿಕ್ಕಲ್ಲಿ ನಡೆಯುತ್ತಿದೆ ಪೊಲೀಸರ ತನಿಖೆ
ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಅದಕ್ಕೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಕಾರಣ ಎಂದು ವಾಟ್ಸಪ್ ಮೆಸೇಜ್ ಮಾಡಿ ಗಿರಿರಾಜ್ ನಾಪತ್ತೆಯಾಗಿದ್ದರು. ಈ ಪ್ರಕರಣ ತೀವ್ರ ಕುತೂಹಲ ಕೆರಳಿಸಿತ್ತು.
ನಾಪತ್ತೆ ಪ್ರಕರಣ ದಾಖಲು
ಗಿರಿರಾಜ್ ನಾಪತ್ತೆಯಾದ ರಾತ್ರಿ ಅವರ ಪತ್ನಿ ಜ್ಯೋತಿ ಅವರು ಜಯನಗರ ಠಾಣೆಯಲ್ಲಿ ದೂರು ನೀಡಿದ್ದರು. ನಾಪತ್ತೆ ಪ್ರಕರಣ ದಾಖಲಿಸಿಕೊಂಡು, ಎಫ್ಐಆರ್ ಮಾಡಲಾಗಿದೆ. ತನಿಖೆ ಆರಂಭಿಸಿದ ಪೊಲೀಸರಿಗೆ ಮಹತ್ವದ ವಿಚಾರಗಳು ತಿಳಿದ ಬಂದಿದ್ದವು.
ಸೆಪ್ಟೆಂಬರ್ 28ರಂದು ಬೆಳಗ್ಗೆ ಮನೆಯಿಂದ ಹೊರಟ ಗಿರಿರಾಜ್, ಎಟಿಎಂ ಕೇಂದ್ರವೊಂದಕ್ಕೆ ತೆರಳಿದ್ದರು. ಅಲ್ಲಿ ಹಣ ಡ್ರಾ ಮಾಡಿಕೊಂಡು ತೆರಳಿದ್ದರು.
ಶಿವಮೊಗ್ಗದ KSRTC ಬಸ್ ನಿಲ್ದಾಣದಿಂದ ಬಸ್ ಹತ್ತಿ ತೆರಳಿದ್ದರು.
ಭದ್ರಾವತಿಯ ಬಾರಂದೂರು ಬಳಿ ಗಿರಿರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದಕ್ಕೂ ಮೊದಲು ಅವರು ತಮ್ಮ ಸಹೋದ್ಯೋಗಿಗಳಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದರು. ಅದರಲ್ಲಿ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಕುರಿತು ತಿಳಿಸಿದ್ದರು.
ಗಿರಿರಾಜ್ ಮೊಬೈಲ್ ಸ್ವಿಚ್ ಆಫ್ ಆದ ಪ್ರದೇಶದಲ್ಲಿ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸಿದರು. ಆದರೆ ಈವರೆಗೂ ಗಿರಿರಾಜ್ ಕುರಿತ ಸುಳಿವು ಪತ್ತೆಯಾಗಿಲ್ಲ.
ಗಿರಿರಾಜ್’ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಪೊಲೀಸರು ಗಿರಿರಾಜ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದಿದ್ದಾರೆ. ಸ್ನೇಹಿತರು, ಆಪ್ತರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ ಈತನಕ ಸುಳಿವು ಸಿಕ್ಕಿಲ್ಲ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200