ಶಿವಮೊಗ್ಗ ಲೈವ್.ಕಾಂ | SAGARA NEWS | 2 ಡಿಸೆಂಬರ್ 2021
ಮರದ ದಿಮ್ಮಿಗಳು ದಿಢೀರ್ ಉರುಳಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಎಂಪಿಎಂ ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ.
ಹುಲಿದೇವರಬನದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಮರದ ದಿಮ್ಮಿಗಳು ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕಿ ಕೊನೆ ಉಸಿರೆಳೆದಿದ್ದಾಳೆ.
ಶ್ರಾವಣಿ (6) ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕಲಘಟಗಿಯ ರವಿ ಮತ್ತು ಮಂಜುಳಾ ದಂಪತಿಯ ಪುತ್ರಿ.
ಆಟದ ಮಧ್ಯೆ ಎದುರಾದ ಜವರಾಯ
ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿನ ಮರಗಳ ಕಡಿತಲೆಗೆ ಗುತ್ತಿಗೆ ನೀಡಲಾಗುತ್ತು. ಮರಗಳನ್ನು ಕಡಿಯಲು ಧಾರವಾಡದಿಂದ ಸುಮಾರು 30 ಕಾರ್ಮಿಕರನ್ನು ಕರೆತರಲಾಗಿತ್ತು. ರವಿ ಮತ್ತು ಮಂಜುಳಾ ದಂಪತಿಯು ಕೆಲಸಕ್ಕಾಗಿ ಬಂದಿದ್ದರು. ಇವರೊಂದಿಗೆ ಮಗಳು ಶ್ರಾವಣಿ ಕೂಡಲ ಬಂದಿದ್ದಳು.
ಬುಧವಾರ ಮರಗಳನ್ನು ಕಡಿದು ದಿಮ್ಮಿಗಳನ್ನು ತಂದು ಜೋಡಿಸಲಾಗಿತ್ತು. ಸಮೀಪದಲ್ಲೇ ಶ್ರಾವಣಿ ಆಟವಾಡುತ್ತಿದ್ದಳು. ಈ ವೇಳೆ ಮರದ ದಿಮ್ಮಿಗಳನ್ನು ದಿಢೀರನೆ ಕೆಳಗೆ ಬಿದ್ದಿದ್ದು, ಶ್ರಾವಣಿ ಮೇಲೆ ಬಿದ್ದಿವೆ.
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200