ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 OCTOBER 2023
SHIMOGA : ಮನೆಯೊಂದರ ಮೇಲೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಗೋವಾ (GOA) ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ಗಾಜನೂರು ಅಗ್ರಹಾರದ ರಾಜಣ್ಣ ಎಂಬುವವರ ಮನೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 7 ಲೀಟರ್ 100 ಎಂಎಲ್ನಷ್ಟು ಗೋವಾ ಮದ್ಯ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?
ಅಬಕಾರಿ ಇಲಾಖೆ ಉಪ ಆಯುಕ್ತೆ ಸುಮಿತಾ.ಕೆ.ಕೆ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ಅಬಕಾರಿ ನಿರೀಕ್ಷಕ ಡಿ.ಎನ್.ಹನುಮಂತಪ್ಪ, ಅಬಕಾರಿ ಉಪ ನಿರೀಕ್ಷಕ ಚಂದ್ರಪ್ಪ, ಅಬಕಾರಿ ಮುಖ್ಯಪೇದೆ ಕೆಂಪರಾಜು, ಅಬಕಾರಿ ರಕ್ಷಕ ನಾಗಪ್ಪ ಶೀರೋಳ್, ನಾಗಪ್ಪ, ರವಿ ಮತ್ತು ವಾಹನ ಚಾಲಕ ನ್ಯಾನರಾಜ್ ದಾಳಿಯಲ್ಲಿ ಭಾಗವಹಿಸಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422