SHIVAMOGGA LIVE NEWS | 4 DECEMBER 2024
ಭದ್ರಾವತಿ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಗಂಭೀರ ಗಾಯಗೊಂಡಿದ್ದ ಭದ್ರಾವತಿಯ ಗೋಬಿ (Gobi) ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ (61) ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
![]() |
ಭದ್ರಾವತಿಯ ಕಾಳಕಾಂಬ ದೇವಸ್ಥಾನ ರಸ್ತೆಯ ನಿವಾಸಿ ಕೇಶವಮೂರ್ತಿ ಅವರ ಮನೆಯಲ್ಲಿ ಕಳೆದ ವಾರ ಸಿಲಿಂಡರ್ ಸೋರಿಕೆಯಾಗಿ ಸ್ಪೋಟ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಕೇಶವಮೂರ್ತಿ ಅವರನ್ನು ಶಿವಮೊಗ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಗ್ಯಾಸ್ ಸೋರಿಕೆಯಾಗಿ ಸ್ಪೋಟಗೊಂಡಾಗ ಕೇಶವಮೂರ್ತಿ ಅವರ ಪತ್ನಿ ಕನಕಲಕ್ಷ್ಮಿ ಕೂಡ ಗಾಯಗೊಂಡಿದ್ದರು. ಅವರನ್ನು ಕೂಡ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಚೇತರಿಸಿಕೊಂಡಿದ್ದಾರೆ.
ಇದನ್ನೂ ಓದಿ » ಶಕ್ತಿ ಯೋಜನೆ, ಶಿವಮೊಗ್ಗದಲ್ಲಿ ಈವರೆಗೂ ಉಚಿತವಾಗಿ ಓಡಾಡಿದ ಮಹಿಳೆಯರೆಷ್ಟು?
ಹೊಸಮನೆ ರಸ್ತೆಯಲ್ಲಿ ಗೋಬಿ ಮಂಚೂರಿ ಅಂಗಡಿ ಮಾಲೀಕರಾದ ಕೇಶವಮೂರ್ತಿ ಅವರು ನಗರದ ಗಾಯತ್ರಿ ಕೋ ಆಪರೇಟೀವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರ ಅಂತ್ಯ ಸಂಸ್ಕಾರ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಬುಧವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200