SHIVAMOGGA LIVE NEWS | 23 MARCH 2024
BHADRAVATHI : ಯಾರೂ ಇಲ್ಲದ ಸಂದರ್ಭ ಮನೆಯೊಳಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿ ಮನೆಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಭದ್ರಾವತಿ ತಾಲೂಕು ಜೇಡಿಕಟ್ಟೆಯಲ್ಲಿ ಘಟನೆ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಮಕೃಷ್ಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಒಳ ನುಗ್ಗಿರುವ ಕಳ್ಳರು 1.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 30 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾರೆ ಎಂದ ಆರೋಪಿಸಲಾಗಿದೆ. ಇದೆ ವೇಳೆ ಮನೆಯಲ್ಲಿದ್ದ ಪೀಠೋಪಕರಣ, ಬಟ್ಟೆ, ದಾಖಲೆ ಪತ್ರಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದದ್ದನ್ನು ಗಮನಿಸಿದ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು 2 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಆರೋಪಿಸಲಾಗಿದೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಯಾರೂ ಇಲ್ಲದಾಗ ಮನೆಯಲ್ಲಿ ಕಾಣಿಸಿತು ಹೊಗೆ, ಬೆಂಕಿ ನಂದಿಸಿ ಒಳ ಹೋದ ಮಾಲೀಕರಿಗೆ ಕಾದಿತ್ತು ಶಾಕ್