ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 6 JANUARY 2024
ಸೊರಬ : ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಅಂದಾಜು 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು (GOLD CHAIN) ಕಿತ್ತು ದುಷ್ಕರ್ಮಿಗಳಿಬ್ಬರು ಬೈಕ್‌ನಲ್ಲಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀಬಾಯಿ ಸರ ಕಳೆದುಕೊಂಡವರು. ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರುಳುತ್ತಿದ್ದ ವೇಳೆ ಮಹಿಳೆಯನ್ನು ದಾರಿಯಲ್ಲಿ ತಡೆದ ಇಬ್ಬರು ಅಪರಿಚಿತ ವ್ಯಕ್ತಿಗಳು, ಈ ಕೃತ್ಯ ಎಸಗಿದ್ದಾರೆ. ಪ್ರಕರಣ ಸೊರಬ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ » ಸಾಹಿತಿ ನಾ.ಡಿಸೋಜ ನಿಧನ, ಸಿಎಂ ಸೇರಿ ಹಲವರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422