ದ್ವಿಚಕ್ರ ವಾಹನದಲ್ಲಿ ತೆರಳುವ ಮಹಿಳೆಯರೆ ಎಚ್ಚರ, ಶಿವಮೊಗ್ಗದ ವಿದ್ಯಾರ್ಥಿನಿಯಿಂದ ದಾಖಲಾಯ್ತು ಕೇಸ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ಬೈಕ್‌ನಲ್ಲಿ ಬಂದ ಆಗಂತುಕನೊಬ್ಬ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಸಿದು ಆಕೆಯನ್ನು ಬೀಳಿಸಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ಕಲ್ಲೂರು – ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಕೋಚಿಂಗ್‌ಗೆ ತೆರಳುತ್ತಿದ್ದ ಬಿ.ಕಾಂ ವಿದ್ಯಾರ್ಥಿನಿ ಲಕ್ಷ್ಮಿ ಅವರ ಚಿನ್ನದ ಸರ ಕಳ್ಳತನವಾಗಿದೆ. ಲಕ್ಷ್ಮಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಚಿನ್ನದ ಸರ ಕಸಿದುಕೊಂಡಿದ್ದಾನೆ. ನಿಯಂತ್ರಣ ತಪ್ಪಿ ಲಕ್ಷ್ಮಿ ತಮ್ಮ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ.

Tunga Nagara Police station building

₹74,000 ಮೌಲ್ಯದ ಸುಮಾರು 9 ಗ್ರಾಮ್‌ ತೂಕದ ಚಿನ್ನದ ಸರ ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಕೃಷಿ ಮೇಳಕ್ಕೆ ಒಂದೇ ದಿನದಲ್ಲಿ 50,000ಕ್ಕೂ ಹೆಚ್ಚು ಜನರು, ಏನೇನಿದೆ ಮೇಳದಲ್ಲಿ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment