ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿಕ್ಷಕಿಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಬಸ್ಸಿನಲ್ಲಿ ಕಳ್ಳತನ ಮಾಡಲಾಗಿದೆ. ಮಾರ್ಚ್ 12ರಂದು ಸಂಜೆ ಶಾಲೆಯಿಂದ ಕೆಲಸ ಮುಗಿಸಿ ಸಿಟಿ ಬಸ್ (city bus) ನಿಲ್ದಾಣದಿಂದ ಗೋಪಾಳಕ್ಕೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ನಗರದ ಗೋಪಾಳದ ನಿವಾಸಿ ಶಿಕ್ಷಕಿ ನಳಿನಾ ಎಂಬುವವರ ಎರಡು ಎಳೆಯ 40 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ಇದರ ಮೌಲ್ಯ ₹4,00,000 ಲಕ್ಷ ಎಂದು ಅಂದಾಜಿಸಲಾಗಿದೆ.

ಹೇಗಾಯ್ತು ಘಟನೆ?
ಬಸ್ನಲ್ಲಿ ವಿಪರೀತ ರಶ್ ಇದ್ದ ಸಂದರ್ಭ ಮಹಿಳೆಯೊಬ್ಬರು ನಳಿನಾ ಅವರಿಗೆ ಕುಳಿತುಕೊಳ್ಳಲು ಸೀಟು ಬಿಟ್ಟುಕೊಟ್ಟಿದ್ದರು. ಆ ವೇಳೆ ನಿಮ್ಮ ಸರ ಕಟ್ ಆಗಿದೆ ಎಂದು ಆ ಮಹಿಳೆ ತಿಳಿಸಿದ್ದರು. ಆಗ ನಳಿನಾ ಅವರು ಸರದ ಒಂದು ಎಳೆ ಕಟ್ ಆಗಿರುವುದನ್ನು ಗಮನಿಸಿ ಅದನ್ನು ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?
ಬಸ್ನಿಂದ ಇಳಿದು ನೋಡಿದಾಗ, ವ್ಯಾನಿಟಿ ಬ್ಯಾಗ್ನ ಜಿಪ್ ಓಪನ್ ಆಗಿರುವು ನಳಿನಾ ಅವರ ಗಮನಕ್ಕೆ ಬಂದಿತ್ತು. ಪರಿಶೀಲಿಸಿದಾಗ ಅದರೊಳಗೆ ಇಟ್ಟುಕೊಂಡಿದ್ದ ಚಿನ್ನದ ಸರ ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?