ಶಿವಮೊಗ್ಗ: ಕೋಟೆ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ದರ್ಶನಕ್ಕೆ ಬಂದಿದ್ದ ವೃದ್ಧೆಯೊಬ್ಬರ ಸುಮಾರು ₹4 ಲಕ್ಷ ಮೌಲ್ಯದ ಚಿನ್ನದ ಸರ (Gold Chain) ಕಳ್ಳತನ ಮಾಡಲಾಗಿದೆ. ಫೆಬ್ರವರಿ 28ರಂದು ಬೆಳಗ್ಗೆ ಜಾತ್ರಾ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿನೋಬನಗರದ 60 ಅಡಿ ರಸ್ತೆಯ ನಿವಾಸಿ ಲಕ್ಷ್ಮಿ ದೇವಿ (75) ದೂರು ನೀಡಿದ್ದಾರೆ. ಫೆಬ್ರವರಿ 28ರಂದು ಬೆಳಿಗ್ಗೆ 6:45ರ ಸುಮಾರಿಗೆ ತಮ್ಮ ಮೊಮ್ಮಗ ದೇವ ಪ್ರಸಾದ್ ಜೊತೆಗೆ ಕೋಟೆ ಮಾರಿಕಾಂಬಾ ದೇವಿ ಜಾತ್ರೆಗೆ ಬಂದಿದ್ದರು. ಸರದಿ ಸಾಲಿನಲ್ಲಿ ನಿಂತು ಬೆಳಗ್ಗೆ 7:20ಕ್ಕೆ ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಆವರಣದಲ್ಲಿ ಕುಳಿತಿದ್ದಾಗ, ಕುತ್ತಿಗೆಯಲ್ಲಿದ್ದ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.
ಕಾಣೆಯಾದ ಬಂಗಾರದ ಸರವು ಸುಮಾರು 40 ಗ್ರಾಂ ತೂಕವಿತ್ತು. ಅದರ ಅಂದಾಜು ಮೌಲ್ಯ ₹4,00,000. ಸರ ಕಳ್ಳತನವಾದ ಆಘಾತದಿಂದ ದೂರುದಾರರು ಅಸ್ವಸ್ಥಗೊಂಡಿದ್ದ ಕಾರಣ, ಮನೆಗೆ ತೆರಳಿ ಚೇತರಿಸಿಕೊಂಡ ಬಳಿಕ ಠಾಣೆಗೆ ಬಂದು ದೂರು ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ