ಗಾಂಧಿ ಬಜಾರ್‌ಗೆ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾದ ವ್ಯಕ್ತಿ, ಹೇಗಾಯ್ತು ಘಟನೆ?

ಶಿವಮೊಗ್ಗ: ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿ ಇದ್ದ ಚಿನ್ನದ ಸರವನ್ನು (Chain) ವ್ಯಕ್ತಿಯೊಬ್ಬ ಕಸಿದುಕೊಂಡು ಪರಾರಿಯಾಗಿದ್ದಾನೆ. ಶಿವಮೊಗ್ಗ ನಗರದ ಕುಂಬಾರಗುಂಡಿಯಲ್ಲಿ ಘಟನೆ ಸಂಭವಿಸಿದೆ. ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಬಿ.ಬಿ.ಸ್ಟ್ರೀಟ್‌ ನಿವಾಸಿ ಪುಷ್ಪಲತಾ ಅವರು ರಾತ್ರಿ 9 ಗಂಟೆ ಹೊತ್ತಿಗೆ ಗಾಂಧಿ ಬಜಾರ್‌ನಲ್ಲಿರುವ ಸಹೋದರನ ಮನೆಗೆ ನಡೆದು ಹೋಗುತ್ತಿದ್ದರು. ಕುಂಬಾರಗುಂಡಿಯಲ್ಲಿ ಸ್ವಲ್ಪ ಕತ್ತಲು ಇರುವ ಜಾಗದಲ್ಲಿ ಪುಷ್ಪಲತಾ ತೆರಳುವಾಗ ವ್ಯಕ್ತಿಯೊಬ್ಬ ಅವರ ಬಳಿ ಬಂದು ಕೊರಳಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

₹1.15 ಲಕ್ಷ ಮೌಲ್ಯದ 12.800 ಗ್ರಾಂ ತೂಕದ ಚಿನ್ನದ ಸರ ಕಳುವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಂತಾರಾ ಶೂಟಿಂಗ್‌ ವೇಳೆ ಅವಘಡ, ನಾಳೆ ನೊಟೀಸ್‌ ಜಾರಿ, ಈತನಕ ಏನೇನಾಯ್ತು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌