ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಯಶವಂತಪುರದಿಂದ ಶಿವಮೊಗ್ಗಕ್ಕೆ ರೈಲಿನಲ್ಲಿ (Intercity Express) ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮಾಂಗಲ್ಯ ಸರ ಕಳುವಾಗಿದೆ. ಬೆಂಗಳೂರಿನ ಸಹಕಾರನಗರ ನಿವಾಸಿ ವಿದ್ಯಾರಾಣಿ ಕೆ.ಎಂ. ಅವರು ಈ ಬಗ್ಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shivamogga-Live-Number-1-Website

ವಿದ್ಯಾರಾಣಿ ಅವರು ಮಾರ್ಚ್ 2ರಂದು ಬೆಳಗ್ಗೆ ಯಶವಂತಪುರ-ಶಿವಮೊಗ್ಗ ಇಂಟರ್ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಲಗೇಜ್ ಸ್ಟ್ಯಾಂಡ್ ಮೇಲಿದ್ದ ಅವರ ಬ್ಯಾಗ್‌ ಬಳಿ ಇಬ್ಬರು ಅಪರಿಚಿತರು ಕುಳಿತಿದ್ದರು. ಮಧ್ಯಾಹ್ನ ಶಿವಮೊಗ್ಗಕ್ಕೆ ಬಂದು ಮನೆ ತಲುಪಿದ ನಂತರ ಬ್ಯಾಗ್‌ ಪರಿಶೀಲಿಸಿದಾಗ, ಅದರಲ್ಲಿದ್ದ ಪೌಚ್ ಹಾಗೂ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ : ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ಮೊದಲು ಈ ಬಗ್ಗೆ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೃತ್ಯ ನಡೆದ ಸ್ಥಳದ ವ್ಯಾಪ್ತಿಯ ಆಧಾರದ ಮೇಲೆ ಪ್ರಕರಣವನ್ನು ಈಗ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2026

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಶಿವಮೊಗ್ಗದ ಇಬ್ಬರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪುರಸ್ಕಾರ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

Leave a Comment