ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಹುಷಾರ್‌, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಗರದ ಕೆಎಸ್ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಉಂಟಾದ ಜನದಟ್ಟಣೆಯನ್ನು ಬಳಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಸುಮಾರು ₹70,000 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್‌ ಪೀಸ್‌ ಪೀಸ್‌, ಮುಂಭಾಗ ಜಖಂ, ಕಾರಣವೇನು?

ದಾವಣಗೆರೆ ಮೂಲದ ಜ್ಯೋತಿ ಎಂಬುವವರು ಶಿವಮೊಗ್ಗ ಬಸ್ ನಿಲ್ದಾಣದಿಂದ ಬಸ್ ಹತ್ತಲು ಪ್ರಯತ್ನಿಸುತ್ತಿದ್ದರು. ಈ ಸಮಯ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು. ಜ್ಯೋತಿ ಅವರು ಬಸ್‌ ಹತ್ತುವಾಗ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದು ಒಳಗಿದ್ದ 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 5 ಗ್ರಾಂ ತೂಕದ ಚಿನ್ನದ ಕಿವಿಯ ಓಲೆಗಳನ್ನು ಕಳ್ಳತನ ಮಾಡಿದ್ದಾರೆ. ಬಸ್ ಹತ್ತಿದ ನಂತರ ಬ್ಯಾಗ್ ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment