SHIVAMOGGA LIVE NEWS | 22 JULY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭದ್ರಾವತಿಯ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್‌ಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಜುಲೈ 19ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಏನೆಲ್ಲ ಪತ್ತೆಯಾಗಿದೆ ಎಂಬುದರ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದೆ.
ದಾಳಿಯಲ್ಲಿ ಏನೆಲ್ಲ ಸಿಕ್ತು?
ನಾಗೇಶ್‌ಗೆ ಸಂಬಂಧಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ ಕೃಷಿ ಜಮೀನು ಪತ್ತೆಯಾಗಿದೆ. 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, 1.76 ಲಕ್ಷ ರೂ. ಮೌಲ್ಯದ ವಾಹನಗಳು, 7 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು, 5,71,640 ರೂ. ನಗದು. ಪತ್ತೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಂದಾಜು 1.33 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿದೆ. ಅವರ ಮನೆಯಲ್ಲಿ ಪತ್ತೆಯಾದ 5 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ ಎಂ.ಹೆಚ್. ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ. ಶಿವಮೊಗ್ಗ, ಚಿತ್ರದುರ್ಗ, ಉಡುಪಿ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ ⇓
ಕಂತೆ ಕಂತೆ ದುಡ್ಡು, ಲಕ್ಷ ಲಕ್ಷದ ಚಿನ್ನ, ಶಿವಮೊಗ್ಗದ ಅಧಿಕಾರಿಯ ಮನೆ, ಲಾಕರ್‌ನಲ್ಲಿ ಸಿಕ್ಕ ಹಣ ಸೀಜ್
LATEST NEWS
- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

- ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

- ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?

- ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





