ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 APRIL 2023
SHIMOGA : ಖಚಿತ ಮಾಹಿತಿ ಮೇರೆಗೆ ಗಾಂಧಿ ಬಜಾರ್ನ ಎಲೆ ರೇವಣ್ಣಕೇರಿಯಲ್ಲಿ ವ್ಯಕ್ತಿಯೊಬ್ಬನನ್ನು ತಪಾಸಣೆಗೆ ಒಳಪಡಿಸಿದಾಗ ಚಿನ್ನಾಭರಣವನ್ನು (Gold Ornaments) ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿಗೆ. ಆತನ ಆಂಗಡಿಯಲ್ಲಿ ಶೋಧ ಕಾರ್ಯ ನಡೆಸಿದಾಗ ಒಟ್ಟು 9 ಕೆ.ಜಿ ಬಂಗಾರ ಪತ್ತೆಯಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.
ಕೋಟೆ ಠಾಣೆ ಇನ್ಸ್ಪೆಕ್ಟರ್ ಶಿವಪ್ರಸಾದ್ ಅವರು ಖಚಿತ ಮಾಹಿತಿ ಮೇರೆಗೆ ಗಾಂಧಿ ಬಜಾರ್ ಎಲೆ ರೇವಣ್ಣಕೇರಿಯಲ್ಲಿ ಅನುಮಾನಾಸ್ಪದಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಆತನ ಬಳಿ ಚಿನ್ನಾಭರಣ (Gold Ornaments) ಪತ್ತೆಯಾಗಿದೆ. ಅಲ್ಲದೆ ಆತ ಅಕ್ರಮವಾಗಿ ಚಿನ್ನಾಭರಣ ಕೊಂಡೊಯ್ಯುತ್ತಿದ್ದ ಅಂಗಡಿಯನ್ನು ಶೋಧಿಸಿದಾಗ ಒಟ್ಟು 9.565 ಕೆ.ಜಿ ಪತ್ತೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಡಹಗಲೆ ಗನ್ ತೋರಿಸಿ ಬೆದರಿಸದ್ದವನು ಅರೆಸ್ಟ್, ಆತನ ಬಳಿ ಏನೇನೆಲ್ಲ ಸಿಕ್ತು?
ವಶಕ್ಕೆ ಪಡೆಯದ ಚಿನ್ನಾಭರಣದ ಒಟ್ಟು ಮೌಲ್ಯ 5.83 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಈ ಚಿನ್ನಾಭರಣಕ್ಕೆ ಸೂಕ್ತ ದಾಖಲೆ ಒದಗಿಸಲು ವ್ಯಕ್ತಿ ವಿಫಲನಾಗಿದ್ದಾನೆ. ಆದ್ದರಿಂದ ಆಭರಣವನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422