ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 APRIL 2024
SHIMOGA : ಪೊಲೀಸ್ ಅಧಿಕಾರಿಗಳಂತೆ ನಟಿಸಿ ಮಹಿಳೆಯೊಬ್ಬರ ಚಿನ್ನಾಭರಣ ಕಳವು ಮಾಡಲಾಗಿದೆ. ಶಿವಮೊಗ್ಗದ ಜೈಲ್ ವೃತ್ತದಲ್ಲಿ ಘಟನೆ ಸಂಭವಿಸಿದೆ. ಹೊಸಮನೆ ಬಡಾವಣೆ ನಿವಾಸಿ ಶಂಕರಮ್ಮ ಎಂಬುವವರು ಪೋಸ್ಟ್ ಆಫೀಸ್‌ಗೆ ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಚಿನ್ನಾಭರಣ ಕದ್ದು ವಂಚಿಸಲಾಗಿದೆ.
‘ರವಿ ಸರ್ ಕರೆಯುತ್ತಿದ್ದಾರೆʼ
ಜೈಲ್ ವೃತ್ತದ ಬಳಿ ಗೌರಮ್ಮ ಅವರನ್ನು ತಡೆದ ವ್ಯಕ್ತಿಯೊಬ್ಬ ‘ರವಿ ಸರ್ ಕರೆಯುತ್ತಿದ್ದಾರೆ’ ಎಂದು ತಿಳಿಸಿದ. ಆತನ ಬಳಿ ಹೋದಾಗ, ‘ಯುವತಿ ಒಬ್ಬಳಿಗೆ ಬೆಳಗ್ಗೆ ಚಾಕು ತೋರಿಸಿ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಅದರ ತನಿಖೆ ನಡೆಸುತ್ತಿದ್ದೇವೆʼ ಎಂದು ನಂಬಿಸಿದರು. ಗೌರಮ್ಮ ಅವರ ಬಂಗಾರದ ಸರ, ಉಂಗುರಗಳನ್ನು ಬಿಚ್ಚಿಸಿ ಪೇಪರ್ ಕವರ್‌ನಲ್ಲಿ ಹಾಕುವಂತೆ ಮಾಡಿದರು. ಬಳಿಕ ಪೇಪರ್ ಕವರನ್ನು ಗೌರಮ್ಮ ಅವರ ಬ್ಯಾಗಿನಲ್ಲಿರಿಸಿದರು.
ಸ್ವಲ್ಪ ದೂರ ಹೋದಾಗ ಕಾದಿತ್ತು ಆಘಾತ
ಜೈಲ್ ಸರ್ಕಲ್‌ನಿಂದ ಸ್ವಲ್ಪ ದೂರ ತೆರಳಿದ ಗೌರಮ್ಮ ಬ್ಯಾಗ್‌ನಲ್ಲಿದ್ದ ಪೇಪರ್ ಕವರ್ ತೆಗೆದಾಗ ಆಘಾತ ಕಾದಿತ್ತು. ಪೇಪರ್ ಕವರ್‌ನಲ್ಲಿ ಚಿನ್ನದ ಆಭರಣಗಳು ಇರಲಿಲ್ಲ. ಜೈಲ್ ಸರ್ಕಲ್ ಬಳಿ ಬಂದಾಗ ಆರೋಪಿಗಳು ಪರಾರಿಯಾಗಿದ್ದರು. 2.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗಕ್ಕೆ ಬರ್ತಿದ್ದಾರೆ ರಾಹುಲ್ ಗಾಂಧಿ, ಸಿನಿಮಾ ನಟ, ನಟಿಯರು, ಯಾವಾಗ, ಎಲ್ಲೆಲ್ಲಿ ಭೇಟಿ ಕೊಡ್ತಾರೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















