ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 MAY 2024
SHIMOGA : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸರ್ಕಾರಿ ಅಧಿಕಾರಿಯೊಬ್ಬರು (Officer) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ವಿನೋಬನಗರದ ಕೆಂಚಪ್ಪ ಬಡಾವಣೆಯ ಮನೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಂಟೆಂಟ್ ಚಂದ್ರಶೇಖರ್ (50) ನೇಣು ಬಿಗಿದುಕೊಂಡವರು.
ಮನೆಯಲ್ಲಿ ಯಾರೂ ಇಲ್ಲದಾಗ ನೇಣಿಗೆ
ಚಂದ್ರಶೇಖರ್ ಪತ್ನಿ ಕವಿತಾ ಶಿವಮೊಗ್ಗದ ವಿಕಲಚೇತನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಚಂದ್ರಶೇಖರ್ ಶಿವಮೊಗ್ಗದಲ್ಲಿ ಮನೆ ಮಾಡಿದ್ದರು. ಮೇ 24ಕ್ಕೆ ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಸಂಬಂಧಿಯೊಬ್ಬರ ಅಂತ್ಯ ಸಂಸ್ಕಾರಕ್ಕೆ ಕವಿತಾ ತಮ್ಮ ಮಗನ ಜೊತೆಗೆ ಮೇ 26ರಂದು ಮಾಚೇನಹಳ್ಳಿಗೆ ತೆರಳಿದ್ದರು. ಅಲ್ಲಿಂದ ರಾತ್ರಿ ಮನೆಗೆ ಮರಳಿದಾಗ ಚಂದ್ರಶೇಖರ್ ಅವರು ಮನೆಯಲ್ಲಿ ಕಾಣಿಸಲಿಲ್ಲಿ. ಪತ್ನಿ ಕವಿತಾ ಮತ್ತು ಮಗ ಕೊಠಡಿಗೆ ಹೋಗಿ ಪರಿಶೀಲಿಸಿದಾಗ ಚಂದ್ರಶೇಖರ್ ನೇಣು ಬಿಗಿ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮರಣೋತ್ತರ ಪರೀಕ್ಷೆ ಬಳಿಕ ಡೆತ್ ನೋಟ್
ಚಂದ್ರಶೇಖರ್ ಅವರ ಮರಣೋತ್ತರ ಪರೀಕ್ಷೆ ಬಳಿಕ ಮನೆಗೆ ಮರಳಿದಾಗ ಕುಟುಂಬದವರಿಗೆ ಡೆತ್ ನೋಟ್ ಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ. ನಿಯಮಬಾಹಿರವಾಗಿ ಲೂಟಿ ಮಾಡಲಾಗಿದೆ. ಹಿರಿಯ ಅಧಿಕಾರಿಗಳಾದ ಪದ್ಮನಾಭ, ಪರಶುರಾಮ, ಬ್ಯಾಂಕ್ನ ಮ್ಯಾನೇಜರ್ ಶುಚಿಸ್ಮತಾ ರಾವುಲ್ ಎಂಬುವವರ ತಮ್ಮ ಸಾವಿಗೆ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಸಾಧ್ಯವಾಗದೆ ಹೈದರಾಬಾದ್ಗೆ ತೆರಳಿದ ವಿಮಾನ, 3 ಗಂಟೆ ಬಳಿಕ ವಾಪಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422