ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿಕ್ಷಕರೊಬ್ಬರ ಬ್ಯಾಂಕ್ ಖಾತೆಯಿಂದ ಅನಾಮಧೇಯ ವ್ಯಕ್ತಿಗಳು ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಕೇವಲ ಹತ್ತು ನಿಮಿಷಗಳ ಅವಧಿಯಲ್ಲಿ ನಾಲ್ಕು ಕಂತುಗಳಲ್ಲಿ ಒಟ್ಟು ₹2,02,375 ಹಣ ಖಾತೆಯಿಂದ ಕಡಿತವಾಗಿದೆ (Withdraw).
ಇದನ್ನೂ ಓದಿ – ಸಾಗರದ ಮಾರಿಕಾಂಬ ದೇವಿ ಜಾತ್ರೆ ಆರಂಭ, ತವರು ಮನೆಯಲ್ಲಿ ದೇವಿಯ ದರ್ಶನ, ಹೇಗಿತ್ತು ವೈಭವ?
ಶಿವಮೊಗ್ಗದ ಕೆನರಾ ಬ್ಯಾಂಕಿನ ಶಾಖೆಯೊಂದರಲ್ಲಿ 1996 ರಿಂದ ವೇತನ ಖಾತೆ ಹೊಂದಿದ್ದಾರೆ. ಈಚೆಗೆ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ಕಡಿತವಾಗಿರುವ ಸಂದೇಶ ಬಂದಿದೆ. ಕೂಡಲೇ ಅವರು ಬ್ಯಾಂಕಿಗೆ ತೆರಳಿ ಖಾತೆಯನ್ನು ಬ್ಲಾಕ್ ಮಾಡಿಸಿ, ಸೈಬರ್ ಕ್ರೈಂ ಸಹಾಯವಾಣಿ 1930 ಗೆ ಕರೆ ಮಾಡಿ ದೂರು ನೀಡಿದ್ದಾರೆ. ನಂತರ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅವರ ಓವರ್ ಡ್ರಾಫ್ಟ್ ಖಾತೆಯಿಂದ ಈ ಹಣ ವರ್ಗಾವಣೆ ಆಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಓ.ಡಿ. ಖಾತೆಯ ಹಣ ಪಡೆಯಲು ಖಾತೆದಾರರು ಖುದ್ದಾಗಿ ಬ್ಯಾಂಕಿಗೆ ಹಾಜರಾಗಿ ಚೆಕ್ ಮೂಲಕ ಮಾತ್ರ ಪಡೆಯಲು ಅವಕಾಶವಿದೆ. ಯುಪಿಐ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ವರ್ಗಾವಣೆಗೆ ಅವಕಾಶವಿಲ್ಲ. ಆದರೂ ಹಣ ವರ್ಗಾವಣೆ ಆಗಿದ್ದು ಹೇಗೆ ಎಂಬ ಅನುಮಾನವಿದೆ ಎಂದು ಶಿಕ್ಷಕ ದೂರಿನಲ್ಲಿ ಆರೋಪಿಸಿದ್ದರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















