ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ (Swamiji) ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ದನವೊಂದು ದಿಢೀರ್ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್ ವಾಹನ ಬ್ರೇಕ್ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ ಮತ್ತೊಂದು ಕಾರು ಸ್ವಾಮೀಜಿ ಇದ್ದ ಕಾರಿಗೆ ಅಪ್ಪಳಿಸಿದೆ. ಮೂರು ವಾಹನಗಳು ಜಖಂ ಆಗಿವೆ.
ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರು ಚಿಕ್ಕಮಗಳೂರಿನಿಂದ ಶಿರಸಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಶ್ರೀಗಳು ಮತ್ತು ಕಾರಿನಲ್ಲಿದ್ದ ಉಳಿದವರು ಪಾರಾಗಿದ್ದಾರೆ. ಶ್ರೀಗಳು ಬದಲಿ ಕಾರಿನಲ್ಲಿ ಪ್ರಯಾಣ ಮುಂದುವರೆಸಿದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಚಂದ್ರಗುತ್ತಿ ಅಭಿವೃದ್ಧಿಗೆ ಯೋಜನೆ ಸಿದ್ಧ, ಬಜೆಟ್‌ನಲ್ಲಿ ಮಹತ್ವದ ನಿರ್ಧಾರ ಪ್ರಕಟ, ಏನದು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200