ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 5 DECEMBER 2024
ಶಿವಮೊಗ್ಗ : ಪ್ರಚೋದನಕಾರಿ ಭಾಷಣ (SPEECH) ಮಾಡಿದ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, ದ್ವೇಷ ಭಾವನೆ ಮೂಡುವಂತೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
20 ದಿನದ ಅಂತರದಲ್ಲಿ ಎರಡನೇ ಕೇಸ್
ಈಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಈಶ್ವರಪ್ಪ ಅವರು ಕೋಮು ಭಾವನೆ ಕೆರಳುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಯನಗರ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಇದಾಗಿ 20 ದಿನದ ಒಳಗೆ ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಕ್ಕ ಕೆಫೆ ಕ್ಯಾಂಟಿನ್, ಮಹಿಳೆಯರಿಂದ ಅರ್ಜಿ ಆಹ್ವಾನ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422