ಈಶ್ವರಪ್ಪಗೆ ಮತ್ತೆ ಸಂಕಷ್ಟ, 20 ದಿನದ ಅಂತರದಲ್ಲಿ ದಾಖಲಾಯ್ತು ಎರಡನೇ ಕೇಸ್‌

SHIVAMOGGA LIVE NEWS, 5 DECEMBER 2024 ➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಪ್ರಚೋದನಕಾರಿ ಭಾಷಣ (SPEECH) ಮಾಡಿದ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈ‍ಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್‌ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್‌ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, ದ್ವೇಷ ಭಾವನೆ ಮೂಡುವಂತೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

KS-Eshwarappa-Press-meet-in-Shimoga

20 ದಿನದ ಅಂತರದಲ್ಲಿ ಎರಡನೇ ಕೇಸ್‌

ಈಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಈಶ್ವರಪ್ಪ ಅವರು ಕೋಮು ಭಾವನೆ ಕೆರಳುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಯನಗರ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಇದಾಗಿ 20 ದಿನದ ಒಳಗೆ ಈ‍ಶ್ವರಪ್ಪ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಕ್ಕ ಕೆಫೆ ಕ್ಯಾಂಟಿನ್‌, ಮಹಿಳೆಯರಿಂದ ಅರ್ಜಿ ಆಹ್ವಾನ

Leave a Comment