ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021
ಕಾರು, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೆ ಹಾನಿ ಸಂಭವಿಸಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಲಕ್ಕಿನಕೊಪ್ಪ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಖಾಸಗಿ ಬಸ್ಸು ಶಿವಮೊಗ್ಗದಿಂದ ಕುವೆಂಪು ವಿಶ್ವವಿದ್ಯಾಲಯದ ಮೂಲಕ ಚಿಕ್ಕಮಗಳೂರಿಗೆ ತೆರಳುತಿತ್ತು. ಲಕ್ಕಿನಕೊಪ್ಪ ಸರ್ಕಲ್ ಬಳಿ ವೇಗವಾಗಿ ಬಂದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಪಕ್ಕಕ್ಕೆ ಹೋಗಿ ನಿಂತಿದೆ.
ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಹಿಳೆಗೆ ಯಾವುದೆ ತೊಂದರೆಯಾಗಿಲ್ಲ. ಬಸ್ಸಿನ ಗ್ಲಾಸ್ ಪುಡಿಯಾಗಿದೆ. ಮುಂಭಾಗಕ್ಕೆ ಹಾನಿಯಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬಂದರಬೇಕಿದೆ.