ಗೆಜ್ಜೇನಹಳ್ಳಿ ರಸ್ತೆಯಲ್ಲಿ ಹಿಟ್‌ ಅಂಡ್‌ ರನ್‌ ಅಪಘಾತ, ಇಂಜಿನಿಯರ್‌ ಸಾವು, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಹುಣಸೋಡು ಗೆಜ್ಜೇನಹಳ್ಳಿ ರಸ್ತೆಯ ರಾಮಕೃಷ್ಣ ಆಶ್ರಮದ ಬಳಿ ಸಂಭವಿಸಿದ ಅಪಘಾತದಲ್ಲಿ ಸಿವಿಲ್ ಇಂಜಿನಿಯರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ನಾಗೇಂದ್ರ ಕಾಲೋನಿ ನಿವಾಸಿ ಮದನ್.ಆರ್ (28) ಮೃತರು. ಕೆಲಸದ ನಿಮಿತ್ತ ಗೆಜ್ಜೇನಹಳ್ಳಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಹೇಗಾಯ್ತು ಅಪಘಾತ?

ಕೆಲಸ ಮುಗಿಸಿ ವಾಪಸ್‌ ಬರುವಾಗ ವಾಹನವೊಂದು ಮದನ್ ಅವರ ಬೈಕ್‌ಗೆ ಡಿಕ್ಕಿ ಹೊಡೆದೆ. ಘಟನೆ ಬಳಿಕ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಮದನ್‌ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ACCIDENT-NEWS-GENERAL-IMAGE.