ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021
ಬೈಕ್ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ.
ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಖಂಡಿಕಾ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200