ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2023
SHIMOGA : ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಬ್ಬ ಬೈಕ್ ಸವಾರ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದು, ಹಿಟ್ ಅಂಡ್ ರನ್ (Hit and Run) ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ತ್ಯಾವರೆಕೊಪ್ಪದ ಸಿಂಹಧಾಮದ (Lion Safari) ಬಳಿ ಘಟನೆ ಸಂಭವಿಸಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿಯ ರಮೇಶ್ (43) ಮೃತಪಟ್ಟಿದ್ದಾನೆ. ಶಿವಮೊಗ್ಗದ ಚಿನ್ಮನೆ (Chinmane) ಗ್ರಾಮದ ಸುನಿಲ್ ಮತ್ತು ಮಂಜುನಾಥ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನಡೆಯುತ್ತಿದೆ.
ಹೇಗಾಯ್ತು ಘಟನೆ?
ಸುನಿಲ್ ಮತ್ತು ಮಂಜುನಾಥ್ ಪ್ರತಿದಿನ ಶಿವಮೊಗ್ಗಕ್ಕೆ ಬಂದು ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಏ.12ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಸುನಿಲ್ ತನ್ನ ಡಿಸ್ಕವರ್ ಬೈಕ್ ಚಲಾಯಿಸುತ್ತಿದ್ದ. ಮಂಜುನಾಥ್ ಮತ್ತು ರಮೇಶ್ ಹಿಂಬದಿ ಕುಳಿತಿದ್ದರು. ಸಿಂಹಧಾಮದ ಬಳಿ ಇವರು ತೆರಳುತ್ತಿದ್ದ ಬೈಕಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಗಾಯಾಳು ರಮೇಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸುನಿಲನ ತಲೆ, ಎದೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಮಂಜುನಾಥ್ ಅವರ ಕಾಲು ಮುರಿದಿದೆ. ಇಬ್ಬರಿಗೂ ಚಿಕಿತ್ಸೆ ಮುಂದುವರೆದಿದೆ. ಕಾರು ಚಾಲಕ ಅಪಘಾತದ ಬಳಿಕ ಕಾರು ನಿಲ್ಲಿಸದೆ (Hit and Run) ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ – ಅಮೆರಿಕಾದಿಂದ ಬಂದ ಫೇಸ್‌ಬುಕ್ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡಿದ ಶಿವಮೊಗ್ಗದ ಯುವಕನಿಗೆ ಕಾದಿತ್ತು ಶಾಕ್
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



