ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOLEHONNUR NEWS | 19 JUNE 2021
ಲಾರಿ ಕೊಡಿಸುವುದಾಗಿ ನಂಬಿಸಿ ಕಂತೆ ಕಂತೆ ದುಡ್ಡು ಪಡೆದುಕೊಂಡು ಎಸ್ಕೇಪ್ ಆಗಿದ್ದ ಭದ್ರಾವತಿಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಂತೆ ಕಂತೆ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ತಾಲೂಕು ವೀರಾಪುರದ ರಾಜೇಂದ್ರ (30) ಬಂಧಿತ. ಈತನಿಂದ ಐದು ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಎನಿದು ಪ್ರಕರಣ?
ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದ ಸುರೇಶ್ ಅವರು ಲಾರಿ ಖರೀದಿಗೆ ಮುಂದಾಗಿದ್ದರು. ಆಗ ಪರಿಚಿತನಾದ ರಾಜೇಂದ್ರ, ಲಾರಿ ಕೊಡಿಸುವುದಾಗಿ ನಂಬಿಸಿದ್ದ. ಸುರೇಶ್ ಅವರನ್ನು ಹೊಳೆಹೊನ್ನೂರಿನ ಎನ್. ಟಿ ಸರ್ಕಲ್‍ಗೆ ಕರೆಸಿಕೊಂಡು ಐದು ಲಕ್ಷ ರೂ. ಹಣ ಪಡೆದುಕೊಂಡಿದ್ದ. ಬಳಿಕ ಲಾರಿಯನ್ನು ಕೊಡಿಸದೆ, ಹಣವನ್ನು ಹಿಂತಿರುಗಿಸದೆ ನಾಪತ್ತೆಯಾಗಿದ್ದ.
ಈ ಸಂಬಂಧ ಸುರೇಶ್ ಅವರು ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಹಣವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422