ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

Published On : ಮಾರ್ಚ್ 20, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಜನನಿಬಿಡ ಪ್ರದೇಶ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಅಂಗಡಿಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು (Honda Activa) ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

140823-Jayanagara-Police-Station

ಗಾಂಧಿನಗರದ ನಿವಾಸಿ ಹಾಗೂ ಬಟ್ಟೆ ಅಂಗಡಿ ಮಾಲೀಕ ಸುನಿಲ್.ಆರ್.ಎಲ್. ಎಂಬುವವರಿಗೆ ಸೇರಿದ ಹೋಂಡಾ ಆಕ್ಟೀವಾ ಕಳುವಾಗಿದೆ. ಮಾರ್ಚ್ 12ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಬಿಳಿ ಬಣ್ಣದ ಹೋಂಡಾ ಆಕ್ಟಿವಾ ವಾಹನದಲ್ಲಿ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತಮ್ಮ ಅಂಗಡಿಗೆ ಬಂದಿದ್ದರು. ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿ ಅಂಗಡಿಗೆ ಹೋಗಿದ್ದರು.

ಇದನ್ನೂ ಓದಿ – ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬೆಳಗ್ಗೆ 11 ಗಂಟೆಗೆ ವಾಪಸ್ ಬಂದು ನೋಡಿದಾಗ ಹೋಂಡಾ ಆಕ್ಟೀವಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಕಳ್ಳತನವಾದ ಸ್ಕೂಟರ್‌ನ ಮೌಲ್ಯ ₹25,000 ಎಂದು ಆಂದಾಜಿಸಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 20, 2026

Leave a Comment