NEWS HIGHLIGHTS
ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಸ್ವಾಮಿ ವಿವೇಕಾನಂದ ಬಡಾವಣೆಯ ನಿವಾಸಿ ಸೂರಜ್ ಕೆ ಎಂಬ ವಿದ್ಯಾರ್ಥಿ ತಮಗೆ ಸೇರಿದ ಹೋಂಡಾ ಆಕ್ಟಿವಾ ಬೈಕ್ ಅನ್ನು ಖಾಸಗಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿ ಬಸ್ಸಿಗೆ ಪಾರ್ಸಲ್ ಹಾಕಲು ಹೋಗಿದ್ದರು. ಅವರು ಬಸ್ಸಿಗೆ ಪಾರ್ಸಲ್ ಹಾಕಿ ಹತ್ತು ನಿಮಿಷದ ನಂತರ ವಾಪಸ್ ಬಂದು ನೋಡಿದಾಗ ಬೈಕ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಎಲ್ಲಾ ಕಡೆ ಹುಡುಕಾಡಿದರೂ ಸಿಗದ ಹಿನ್ನೆಲೆ ದೂರು ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
