ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 7 APRIL 2021
ಹೊಸನಗರ ಠಾಣೆ ಪೊಲೀಸರು ದೊಡ್ಡ ಬೇಟೆಯಾಡಿದ್ದಾರೆ. ಕಾರಿನಲ್ಲಿದ್ದ ಲಕ್ಷಾಂತರ ಮೌಲ್ಯದ ಗಾಂಜಾ, ನಾಲ್ಕು ಬಂದೂಕು, ಜೀವಂತ ಗುಂಡುಗಳು, ಮೊಬೈಲ್ ಮತ್ತು ನಗದು ವಶಕ್ಕೆ ಪಡೆದಿದ್ದಾರೆ.
ಕಳೂರು ನಂದ್ಯಾಲಕೊಪ್ಪ ಗ್ರಾಮದ ಸುನಿಲ್ (45) ಎಂಬುವವರ ಕಾರಿನಲ್ಲಿ ಗಾಂಜಾ ಇರಿಸಿಕೊಂಡಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರಿಗೆ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆಯಾಗಿದೆ.
ಕಾರಿನಲ್ಲಿತ್ತು ಕೆಜಿಗಟ್ಟಲೆ ಗಾಂಜಾ
ಸುನಿಲ್‍ನ ಕಾರಿನಲ್ಲಿ 16 ಕೆ.ಜಿ. 420 ಗ್ರಾಂ ಗಾಂಜಾ ಪತ್ತೆಯಾಗಿದೆ. ಇದರಿಂದ ಮೌಲ್ಯ ಸುಮಾರು 5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇನ್ನು, 4 ಬಂದೂಕು, ಜೀವಂತ ಮದ್ದುಗುಂಡು, 3,500 ರೂ. ನಗದು, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ.
ಆರೋಪಿ ವಿರುದ್ಧ ಹೊಸನಗರ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ, ಆರ್ಮ್ಸ್ ಆಕ್ಟ್‍ನ ಅಡಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






