ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 DECEMBER 2022
ಶಿವಮೊಗ್ಗ : ಮನೆ ಕಳ್ಳತನ (House Theft Arrest) ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರುಪಾಯಿ ನಗದು, ಚಿನ್ನಾಭರಣ, ಬೈಕ್ ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮದ ಮಂಜುನಾಥ್ ಅಲಿಯಾಸ್ ಜಂಗ್ಲಿ, ಅಶೋಕ್, ಮೊಹಮ್ಮದ್ ಸುಹೇಲ್ ಅಲಿಯಾಸ್ ಟುಯ್ಯಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
(House Theft Arrest)
ಕಂತೆ ಕಂತೆ ಹಣ ವಶಕ್ಕೆ
ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಂತೆ ಕಂತೆ ಹಣ ವಶಕ್ಕೆ ಪಡೆದಿದ್ದಾರೆ. 11.52 ಲಕ್ಷ ರೂ.ನಗದು ವಶಕ್ಕೆ ಪಡೆಯಲಾಗಿದೆ. 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಬೈಕ್ ಒಂದನ್ನು ವಶಕ್ಕೆ ಪಡೆಯಲಾಗಿದೆ.
ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್, ಪಿಎಸ್ಐಗಳಾದ ಶಿವಪ್ರಸಾದ್, ದೂದ್ಯನಾಯ್ಕ, ಸುನಿಲ್ ಬಿ.ಚಂದ್ರಪ್ಪ, ಎಎಸ್ಐ ಮನೋಹರ್, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಲಂಕೇಶ್ ಕುಮಾರ್, ಕಾಂತರಾಜ್, ಹರೀಶ್, ಅರಿಹಂತ ಶಿರಹಟ್ಟಿ, ಪುನಿತ್ ಕುಮಾರ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422