ಶಿವಮೊಗ್ಗ ಲೈವ್.ಕಾಂ |BHADRAVATHI NEWS | 26 NOVEMBER 2020
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. 1.10 ಲಕ್ಷ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ದೋಚಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿಯ ಜನ್ನಾಪುರದ ಕುರುಬರ ಬೀದಿಯ ಕೆ.ಸಿ.ರಾಮಚಂದ್ರ ಅವರ ಮನೆಯಲ್ಲಿ ಕಳ್ಳತನವಾಗಿದೆ. ಪತ್ನಿಯ ಚಿಕಿತ್ಸೆಗಾಗಿ ರಾಮಚಂದ್ರ ಅವರು ಬೆಂಗಳೂರಿಗೆ ತೆರಳಿದ್ದರು. ಹಿಂತಿರುಗಿ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಇಂಟರ್‍ಲಾಕ್ ಮುರಿದ ಕಳ್ಳರು
ಮನೆಯ ಕೊಠಡಿಯಲ್ಲಿದ್ದ ಬೀರುವಿನ ಇಂಟರ್‍ಲಾಕ್ ಮುರಿದಿರುವ ಕಳ್ಳರು 20 ಸಾವಿರ ರೂ. ನಗದು ಕದ್ದಿದ್ದಾರೆ. ಮತ್ತೊಂದು ಕೊಠಡಿಯಲ್ಲಿದ್ದ ಬೀರುವಿನ ಬಾಗಿಲು ಮುರಿದು, 30 ಗ್ರಾಂ ಬಂಗಾರದ ಬಳೆ, 15 ಸಾವಿರ ರೂ. ಮೌಲ್ಯದ ಬಂಗಾರದ ಸರ, 10 ಗ್ರಾಂನ ಉಂಗುರವನ್ನು ಕದ್ದೊಯ್ದಿದ್ದಾರೆ. ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]