ಶಿವಮೊಗ್ಗ : ದಿನಸಿ ಖರೀದಿಸಿ ಹಿಂತಿರುಗುವಷ್ಟರಲ್ಲಿ ಮನೆಯಲ್ಲಿ (House) ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನವಾಗಿದೆ. ಸವಳಂಗ ರಸ್ತೆಯ ಜ್ಯೋತಿನಗರದ ಪ್ರಕಾಶ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪ್ರಕಾಶ್ ಅವರು ತಮ್ಮ ಪತ್ನಿಯೊಂದಿಗೆ ಗೋಪಿ ಸರ್ಕಲ್‌ನಲ್ಲಿ ದಿನಸಿ ಖರೀದಿಗೆ ತೆರಳಿದ್ದರು. ಮನೆಗೆ (House) ಹಿಂತಿರುಗಿ ಬೆಡ್ ರೂಂಗೆ ಹೋದಾಗ ಚಿನ್ನಾಭರಣದ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬೀರುವಿನಲ್ಲಿಟ್ಟಿದ್ದ 9 ಲಕ್ಷ ರೂ. ಮೌಲ್ಯದ ವಿವಿಧ ಚಿನ್ನಾಭರಣಗಳು, 51 ಸಾವಿರ ರೂ. ನಗದು ನಾಪತ್ತೆಯಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ » ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ
ಮನೆಯ ಬಲಭಾಗದ ಕಿಟಕಿಯ ಸರಳು ಮುರಿದು ಒಳಗೆ ನುಗ್ಗಿರುವ ಕಳ್ಳರು ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






