SHIVAMOGGA LIVE NEWS | 4 DECEMBER 2022
ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ನಗದು, ಮೊಬೈಲ್, ಎಲ್.ಸಿ.ಡಿ ಟಿವಿ, ವಾಚ್ ಕಳ್ಳತನ ಮಾಡಲಾಗಿದೆ. ಎಗ್ಸಾಸ್ಟ್ ಫ್ಯಾನ್ (exhaust fan) ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಕಳ್ಳತನ ಮಾಡಿದ ವಸ್ತುಗಳನ್ನು ಮುಂಬಾಗಿಲಿನ ಮೂಲಕವೆ ಹೊತ್ತೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಣ್ಣಾನಗರ 1ನೇ ಅಡ್ಡರಸ್ತೆಯಲ್ಲಿರುವ ಬಸವರಾಜಪ್ಪ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಬಸವರಾಜಪ್ಪ ಅವರು ಪತ್ನಿಯೊಂದಿಗೆ ಹೊನ್ನಾಳಿ ತಾಲೂಕಿನಲ್ಲಿರುವ ತಮ್ಮ ತೋಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಬಸವರಾಜಪ್ಪ ಅವರು ನ.28ರಂದು ತೋಟಕ್ಕೆ ತೆರಳಿದ್ದರು. ಡಿ.2ರಂದು ಮನೆಗೆ ಬಂದಾಗ, ಬಾಗಿಲು ಲಾಕ್ ಆಗಿಯೇ ಇತ್ತು. ಬೀಗ ತೆಗೆದು ಬೆಡ್ ರೂಂಗೆ ಹೋದಾಗ ವಸ್ತುಗಳು ಚೆಲ್ಲಾಪಿಲ್ಲಿ ಆಗಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ 20 ಸಾವಿರ ರೂ. ನಗದು, 10 ಸಾವಿರ ಮೌಲ್ಯದ ಸ್ಯಾಮ್ ಸಂಗ್ ಕಂಪನಿಯ ಎಲ್.ಸಿ.ಡಿ ಟಿವಿ, 600 ರೂ. ಮೌಲ್ಯದ ಟೈಟಾನ್ ವಾಚ್, ನೋಕಿಯಾ ಕೀ ಪ್ಯಾಡ್ ಮೊಬೈಲ್ ಕಳ್ಳತನವಾಗಿರುವುದು ಗೊತ್ತಾಗಿದೆ.
ಅಡುಗೆ ಮನೆಯ ಎಗ್ಸಾಸ್ಟ್ ಫ್ಯಾನ್ (exhaust fan) ಮುರಿದು ಕಳ್ಳರು ಮನೆಯೊಳಗೆ ನುಗ್ಗಿದ್ದಾರೆ. ಕಳ್ಳತನದ ಬಳಿಕ ಮತ್ತೊಂದು ಕೀ ಬಳಸಿ ಮನೆಯ ಒಳಗಿಂದ ಬಾಗಿಲು ತೆಗದು ಪುನಃ ಬೀಗ ಹಾಕಿಕೊಂಡು ಹೋಗಿದ್ದಾರೆ ಎಂದು ಬಸವರಾಜಪ್ಪ ಅವರು ದೂರಿನಲ್ಲಿ ತಿಳಿಸಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ALSO READ – ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200